ಬೆಂಗಳೂರು: ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕರ್ನಾಟಕ ಸರ್ಕಾರ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಇಂದು (ಆಗಸ್ಟ್ 6) ಮಧ್ಯಾಹ್ನ ಆದೇಶ ಹೊರಡಿಸಿದ್ದಾರೆ. ಇದೀಗ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೈಡ್‌ಲೈನ್ಸ್ ಪ್ರಕಟವಾಗಿದೆ. ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ.
ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. ರಾಜ್ಯಾದ್ಯಂತ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿ ಆಗಲಿದೆ.
ಕೇರಳ ಗಡಿ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. ರಾಜ್ಯದಲ್ಲಿ ರಾತ್ರಿ 9ರಿಂದ ಮುಂಜಾನೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿ ಆಗಲಿದೆ. ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಫ್ಯೂ ಗೈಡ್‌ಲೈನ್ಸ್ ಪ್ರಕಟ
ಶುಕ್ರವಾರ ರಾತ್ರಿ 9 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಆರಂಭ ಆಗಲಿದೆ. ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ. ಅಗತ್ಯವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲಾಗಿದೆ. ಆ ವೇಳೆ, ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಖರೀದಿಗೆ ಅವಕಾಶ ನೀಡಲಾಗುತ್ತದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುತ್ತದೆ. ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಮದ್ಯ ಪಾರ್ಸೆಲ್ಗೆ ಮಾತ್ರ ಅವಕಾಶ ನೀಡಲಾಗಿದೆ. ದಿನದ 24 ಗಂಟೆಯೂ ಹೋಮ್ ಡೆಲಿವರಿಗೆ ಅವಕಾಶ ಇರಲಿದೆ.
ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ರೈಲು, ವಿಮಾನ ಹಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ವೀಕೆಂಡ್‌ನಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಇರುತ್ತೆ. ರೈಲು, ವಿಮಾನ ಟಿಕೆಟ್ ತೋರಿಸಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಮದುವೆಯಲ್ಲಿ 100 ಜನರು ಭಾಗಿಯಾಗಲು ಅವಕಾಶ ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನ ಭಾಗಿಯಾಗಲು ಅವಕಾಶ ಕೊಡಲಾಗಿದೆ.
ಜಾತ್ರೆ, ದೇಗುಲಗಳಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ, ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಪ್ರಾರ್ಥನೆ ಮತ್ತು ಪೂಜೆ ಮಾಡುವುದಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ದೇಗುಲಗಳಲ್ಲಿ ಜಾತ್ರೆ, ಮೆರವಣಿಗೆಗೆ ಅವಕಾಶವಿಲ್ಲ ಎಂದು ಸೂಚನೆ ನೀಡಲಾಗಿದೆ. ಅಗತ್ಯವಸ್ತುಗಳ ಕೈಗಾರಿಕೆಗಳನ್ನು ತೆರೆಯುವುದಕ್ಕೆ ಅನುಮತಿ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ