ಬೆಂಗಳೂರು: ರಕ್ತದಾನವು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಆದರೆ ಇಂದು ಸಕಾಲದಲ್ಲಿ ರಕ್ತ ದೊರಕದೆ ಅಸಂಖ್ಯಾತ ರೋಗಿಗಳು ಸಾವನ್ನಪ್ಪುತ್ತಿರುವ ಘಟನೆಗಳೂ ನಡೆಯುತ್ತಿರುತ್ತವೆ. ಭಾರತದಲ್ಲಿ ಪ್ರತಿ ವರ್ಷ ಸುಮಾರು 1.2 ಕೋಟಿ ಯುನಿಟ್ ರಕ್ತದ ಅಗತ್ಯವಿದ್ದು, 1.1 ಕೋಟಿ ಮಾತ್ರ ಲಭ್ಯವಿದೆ. ಇಲ್ಲಿ 11.5 ಲಕ್ಷ ಯುನಿಟ್ ರಕ್ತದ ಕೊರತೆ ಇದೆ ಎಂದು ಸರಕಾರದ ಸಚಿವಾಲಯದ ವರದಿ ಹೇಳುತ್ತವೆ. ಕೋವಿಡ್ ನಂತರದ ದಿನಗಳಲ್ಲಿ ರಕ್ತದ ಸಂಗ್ರಹಣೆಯಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದೆ.
ದೇಶದಲ್ಲಿ ರಕ್ತದ ಕೊರತೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ರಕ್ತದಾನ ಕಾರ್ಯಕ್ಕೆ ಬಹಳಷ್ಟು ಮಹತ್ವ ನೀಡುತ್ತಾ ಬಂದಿದೆ. ಕಳೆದ ಎರಡು ದಶಕಗಳಿಂದಲೂ ಸಂಘಟನೆಯು ಜಾತಿ, ಮತ ಭೇದವಿಲ್ಲದೇ ರಕ್ತದಾನ ಶಿಬಿರ ಮತ್ತು ವೈಯಕ್ತಿಕ ರಕ್ತದಾನದ ಮೂಲಕ ತುರ್ತು ಸಂದರ್ಭಗಳಲ್ಲಿ ರಕ್ತ ಪೂರೈಕೆ ಮಾಡಿ ಜನರ ಜೀವ ಉಳಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಾ ಬರುತ್ತಿದೆ.
ಪಾಪ್ಯುಲರ್ ಫ್ರಂಟ್, ಮಾನವೀಯ ಸೇವೆಯನ್ನು ವ್ಯಾಪಕಗೊಳಿಸುವ, ರಕ್ತದ ಕೊರತೆ ನೀಗಿಸುವ, ಜನರಲ್ಲಿ ಜಾಗೃತಿ ಮೂಡಿಸಿ ಅವರನ್ನು ರಕ್ತದಾನಕ್ಕೆ ಪ್ರೇರೇಪಿಸುವ ಒಂದು ವಿಶಾಲ ಪರಿಕಲ್ಪನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಎಂಬ ರಾಷ್ಟ್ರ ಮಟ್ಟದ ವೇದಿಕೆಗೂ ಚಾಲನೆ ನೀಡಿದೆ. ಅದರಂತೆ ಕರ್ನಾಟಕದಲ್ಲಿಯೂ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ವೇದಿಕೆಯನ್ನು ರಚಿಸಲಾಗಿದೆ.
ಇದೀಗ ಜುಲೈ 15ರಿಂದ ಆಗಸ್ಟ್ 15ರ ವರೆಗೆ ರಾಜ್ಯಾದ್ಯಂತ ಬ್ಲಡ್ ಡೋನರ್ಸ್ ಫೋರಂ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಅಂಗವಾಗಿ 75ನೇ ಸ್ವಾತ್ರಂತ್ರ್ಯೋತ್ಸವ ದಿನದಂದು ರಾಜ್ಯಾದ್ಯಂತ 50ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದ್ದು, 10 ಸಾವಿರ ಯುನಿಟ್ ರಕ್ತವನ್ನು ಸಂಗ್ರಹಿಸುವ ಗುರಿ ಹೊಂದಲಾಗಿದೆ. ರಕ್ತದಾನಿಗಳು ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡು ಈ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕು.
ಈ ಮೂಲಕ ಅಗತ್ಯ ಹಾಗೂ ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯನ್ನು ನೀಗಿಸಲು ಮತ್ತು ಜನರ ಜೀವ ಉಳಿಸುವ ಮಾನವೀಯ ಸೇವೆಯಲ್ಲಿ ಕೈಜೋಡಿಸಬೇಕೆಂದು ವಿನಂತಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಎ.ಕೆ.ಅಶ್ರಫ್, ರಾಜ್ಯ ಕಾರ್ಯದರ್ಶಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕರ್ನಾಟಕ, ಅಬೂ ಸಿನಾನ್, ರಾಜ್ಯ ಸಂಚಾಲಕರು, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ, ಅಬ್ದುಲ್ ಮಜೀದ್ ಜೋಕಟ್ಟೆ, ರಾಜ್ಯ ಉಪ ಸಂಚಾಲಕರು, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ, ಇಲ್ಯಾಸ್ ಅಹ್ಮದ್, ಝೋನಲ್ ಅಧ್ಯಕ್ಷರು, ಬೆಂಗಳೂರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ