ಭಾರತ ದೇಶದ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಬಹಳ ಅದ್ದೂರಿಯಾಗಿ ನಡೆಸಲು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ತೀರ್ಮಾನಿಸಲಾಗಿದೆ.
ಇದರಂತೆ ಆಗಸ್ಟ್ 15ರಂದು ಭಾರತ ಸಮಯ ರಾತ್ರಿ 10.00 ಗಂಟೆಗೆ ಸರಿಯಾಗಿ ಝೂಮ್ ಅಪ್ಲಿಕೇಶನ್ ಮೂಲಕ Virtual Convention ಕಾರ್ಯಕ್ರಮ ನಡೆಯಲಿದೆ.
ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ| ಶೇಖ್ ಬಾವ ಮಂಗಳೂರು ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರಕಾರದ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ರವರು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಬಯಸುವವರಿಗೆ ಪ್ರತ್ಯೇಕ ನೊಂದಾವಣೆ ಪೋರ್ಟಲ್ ತಯಾರಿಸಲಾಗಿದ್ದು, ಭಾಗಿಯಾಗುವವರು https://forms.gle/5KpNp5ARTCiiNQf88 ಈ ಪೋರ್ಟಲ್ ನಲ್ಲಿ ನೊಂದಾವಣೆ ಮಾಡುವಂತೆ ಅಂತರಾಷ್ಟ್ರೀಯ ಸಮಿತಿ ತಿಳಿಸಲಾಗಿದೆ.
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮುಖ್ಯವಾಗಿ ನಡೆಯಲಿರುವ ಈ ಕಾರ್ಯಕ್ರಮವಲ್ಲದೇ ಕೆಸಿಎಫ್ ಸದಸ್ಯ ರಾಷ್ಟ್ರಗಳಲ್ಲಿ “ನನ್ನ ಕನಸಿನ ಭಾರತ” ಎಂಬ ವಿಷಯವಾಗಿ ಪ್ರಬಂಧ ಸ್ಪರ್ಧೆ, ರಕ್ತದಾನ ಶಿಬಿರ, ಮಕ್ಕಳಿಗೆ ಚಿತ್ರ ರಚನೆ ಸ್ಪರ್ಧೆಗಳನ್ನೂ ಏರ್ಪಡಿಸಲಾಗುತ್ತದೆ ಎಂದು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾಬ್ ಖಮರುದ್ದೀನ್ ಗೂಡಿನಬಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ