75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ ವಿವಿಧ ಘಟಕಗಳಲ್ಲಿ ಆಝಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಜೀಬ್ ಕೊಂಡಂಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಸಮಿತಿಯ ಹೊರಡಿಸಿದ ಸುತ್ತೋಲೆಯಂತೆ ವಿವಿಧ ಕಾರ್ಯಕ್ರಮಗಳನ್ನೊಳಗೊಂಡ “ಆಝಾದೀ ಸಪ್ತಾಹ”ವು ರಾಜ್ಯದ ವಿವಿಧೆಡೆಗಳಲ್ಲಿ ನಡೆಸಲ್ಪಡುತ್ತಿದ್ದು.ಈ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಇಂದು ರಾತ್ರಿ 8 ಗಂಟೆಗೆ ಸರಿಯಾಗಿ ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ ಸೋಮವಾರಪೇಟೆಯವರ ಸ್ವಾತಂತ್ರ್ಯ ದಿನ ಸಂದೇಶ ಭಾಷಣ ಜಿಲ್ಲೆಯ ಅಧಿಕೃತ ಯುಟ್ಯೂಬ್ ಚಾನೆಲ್ನಲ್ಲಿ ನೇರ ಪ್ರಸಾರವಾಗಲಿದೆ.
ಈಗಾಗಲೇ ಡಿವಿಷನ್ ಮಟ್ಟದಲ್ಲಿ ಆಝಾದಿ ಸೆಮಿನಾರುಗಳನ್ನು ಹಮ್ಮಿಕೊಂಡು ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಗಳ ವಿಚಾರಗಳನ್ನೊಳಗೊಂಡ ಕಾರ್ಯಕ್ರಮ ನಡೆಸಲಾಗಿದೆ.
ಅದೇ ರೀತಿ ಜಿಲ್ಲೆಯ ಸುಮಾರು 90ರಷ್ಟು ಶಾಖೆಗಳಲ್ಲಿ ಧ್ವಜಾರೋಹಣದ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನ ಎಸ್ಎಸ್ಎಫ್ನ ಕಾರ್ಯಕರ್ತರು ನಡೆಸಲಿದ್ದಾರೆ.
ಪ್ರತಿವರ್ಷವೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೃಹತ್ ಆಝಾದಿ ರಾಲಿಯನ್ನು ಹಮ್ಮಿಕೊಳ್ಳುತ್ತಿದ್ದರೂ ಕಳೆದೆರಡು ವರ್ಷಗಳಿಂದ ಲಾಕ್ಡೌನ್ ನಿಂದ ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ