ಬೆಂಗಳೂರು,ಆ.15: ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ತೆರೆದ ಜೀಪ್ನಲ್ಲಿ ಸಿಎಂ ಬೊಮ್ಮಾಯಿ ಪರೇಡ್ ಪರಿವೀಕ್ಷಣೆ ಮಾಡಿದರು. ಗೌರವ ರಕ್ಷೆ ಸ್ವೀಕಾರ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಶುಭಾಶಯ ಕೋರಿದರು. ಇದೇ ವೇಳೆ ಹಲವು ಹೊಸ ‘ಅಮೃತ’ ಯೋಜನೆಗಳನ್ನು ಘೋಷಿಸಿದರು.
ಅಮೃತ ಗ್ರಾಮೀಣ ವಸತಿ ಯೋಜನೆ
ಸ್ವಾತಂತ್ರ್ಯೋತ್ಸವದಂದು ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ಅಮೃತ ಗ್ರಾಮೀಣ ವಸತಿ ಯೋಜನೆ ಘೋಷಿಸಿದ್ದಾರೆ. ಆಯ್ದ 750 ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಅನುಷ್ಠಾನವಾಗಲಿದೆ. ವಸತಿ ರಹಿತ, ಆಶ್ರಯರಹಿತರನ್ನು ಗುರುತಿಸಿ ವಸತಿ ಸೌಲಭ್ಯ ಕಲ್ಪಿಸಲಾಗುವುದು.
ಅಮೃತ ರೈತ ಉತ್ಪಾದಕ ಸಂಸ್ಥೆ ಯೋಜನೆ
ಅಮೃತ ರೈತ ಉತ್ಪಾದಕ ಸಂಸ್ಥೆ ಯೋಜನೆಯನ್ನು ಸಿಎಂ ಘೋಷಿಸಿದ್ದಾರೆ. ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆಗೆ ಮತ್ತು ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು ಸಂಸ್ಥೆಗಳನ್ನು ಆರಂಭಿಸಲಾಗುತ್ತಿದೆ. 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಈ ಯೋಜನೆಯಡಿ ಸ್ಥಾಪಿಸಲಾಗುವುದು. ಪ್ರತಿ ಸಂಸ್ಥೆಗೆ 30 ಲಕ್ಷ ರೂ.ನಂತೆ 3 ವರ್ಷ ನೀಡಲಾಗುವುದು. ಇದಕ್ಕಾಗಿ 225 ಕೋಟಿ ರೂ. ಅನುದಾನ ನೀಡಲಾಗುವುದು ಅಂತಾ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಅಮೃತ ಗ್ರಾಮ ಪಂಚಾಯಿತಿ ಯೋಜನೆ
ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ ಆಯ್ದ 750 ಗ್ರಾಮ ಪಂಚಾಯಿಗಳಲ್ಲಿ ಬೀದಿ ದೀಪಗಳು, ಪ್ರತಿಯೊಂದು ಮನೆಗೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ಶೇ.100ರಷ್ಟು ಘನತಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರವಿದ್ಯುತ್, ಡಿಜಿಟಲ್ ಗ್ರಂಥಾಲಯಗಳೊಂದಿಗೆ ಶಾಲೆ ಸ್ಥಾಪನೆ ಮತ್ತು ಸಮಗ್ರ ಮೂಲಸೌಕರ್ಯದೊಂದಿಗೆ ಶಾಲೆಗಳ(School) ಮತ್ತು ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಅಮೃತ ಸ್ವಸಹಾಯ ಕಿರು ಉದ್ದಿಮೆ ಘೋಷಣೆ
ಸಿಎಂ ಬಸವರಾಜ್ ಬೊಮ್ಮಾಯಿಯವರು ಅಮೃತ ಸ್ವಸಹಾಯ ಕಿರು ಉದ್ದಿಮೆ ಘೋಷಿಸಿದರು. ಇದರಿಂದ 7,500 ಸ್ವಸಹಾಯ ಗುಂಪುಗಳು ಉದ್ದಿಮೆಗಳಾಗಿ ಬದಲಾಗಲಿವೆ. ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸಲು ತಲಾ 1 ಲಕ್ಷ ರೂ. ಅನುದಾನ ನೀಡಲಾಗುವುದು ಅಂತಾ ಸಿಎಂ ತಿಳಿಸಿದ್ದಾರೆ.
ಅಮೃತ ನಿರ್ಮಲ ನಗರ ಯೋಜನೆ
ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಸಿಎಂ ಬೊಮ್ಮಾಯಿ ಅಮೃತ ನಿರ್ಮಲ ನಗರ ಯೋಜನೆ ಘೋಷಿಸಿದರು. ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡುವುದು ಅಮೃತ ನಿರ್ಮಲ ನಗರ ಯೋಜನೆಯ ಉದ್ದೇಶವಾಗಿದೆ. ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ. ಅನುದಾನ ನೀಡಲಾಗುವುದು. ಇದಕ್ಕಾಗಿ ಒಟ್ಟು 75 ಕೋಟಿ ರೂ. ಒದಗಿಸಲಾವುದು ಎಂದು ಸಿಎಂ ತಿಳಿಸಿದ್ದಾರೆ.
ಅಮೃತ ಶಾಲಾ ಸೌಲಭ್ಯ ಯೋಜನೆ
ಸಿಎಂ ಬಸವರಾಜ್ ಬೊಮ್ಮಾಯಿ ಮಕ್ಕಳಿಗೆ ಉನ್ನತ ಶಿಕ್ಷಣ ದೊರಕಿಸುವ ನಿಟ್ಟಿನಲ್ಲಿ ಅಮೃತ ಶಾಲಾ ಸೌಲಭ್ಯ ಯೋಜನೆಯನ್ನೂ ಘೋಷಿಸಿದ್ದಾರೆ. ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಸೇರಿದಂತೆ ಸಮಗ್ರ ಸೌಲಭ್ಯವನ್ನು ಈ ಯೋಜನೆಯಡಿ ಒದಗಿಸಲಾಗುವುದು. 750 ಶಾಲೆಗಳಿಗೆ ತಲಾ 10 ಲಕ್ಷ ರೂ. ನೀಡಲಾಗುವುದು. ಇದಕ್ಕಾಗಿ ಒಟ್ಟು 75 ಕೋಟಿ ರೂ. ವೆಚ್ಚ ಮಾಡಲಾಗುವುದು ಅಂತಾ ತಿಳಿಸಿದ್ದಾರೆ.
750 ಅಂಗನವಾಡಿ ಕೇಂದ್ರಗಳು ಮೇಲ್ದರ್ಜೆಗೆ
ಅಮೃತ ಅಂಗನವಾಡಿ ಯೋಜನೆಯಡಿ 750 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಪ್ರತಿ ಅಂಗನವಾಡಿಗೆ 1 ಲಕ್ಷ ರೂ. ನೀಡಲಾಗುವುದು. ಇದಕ್ಕಾಗಿ 7.5 ಕೋಟಿ ರೂ. ವಿನಿಯೋಗಿಸಲಾಗುವುದು ಎಂದು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ