ಬೆಂಗಳೂರು,ಆ.16: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸದಿರಲು ಆಗ್ರಹಿಸಿ ಉನ್ನತ ಶಿಕ್ಷಣ ಸಚಿವರ ಕಚೇರಿಗೆ ವಿದ್ಯಾರ್ಥಿಗಳ ಮಾರ್ಚ್.

ಈಗಾಗಲೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ- 2020 ಜಾರಿಗೊಳಿಸುವ ಬಗ್ಗೆ ರಾಜ್ಯ ಸರಕಾರ ಒಲವು ತೋರುತ್ತಿರುವುದು ಕಾಣುತ್ತಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆಳವಾಗಿ ಅಧ್ಯಯನ ನಡೆಸಿದರೆ ಅದರಲ್ಲಿ ಆಕರ್ಷಕ ಪದಗಳನ್ನು ಬಿಟ್ಟು ಪ್ರಾಯೋಗಿಕವಾಗಿ ಜಾರಿಗೊಳಿಸುವ ಪೂರಕವಾದ ಅಂಶಗಳಿಲ್ಲ.
ಈ ನೀತಿಯು, ಏಕ ಸಂಸ್ಕೃತಿ, ಸಿದ್ಧಾಂತವನ್ನು ಹೇರಿಕೆ ಮಾಡುವ ದೂರದೃಷ್ಟಿಯನ್ನು ಹೊಂದಿದೆ ಎಂಬುದು ಬಹಿರಂಗವಾಗಿದೆ. ವಿವಿಧ ಧರ್ಮಗಳು, ಭಾಷೆಗಳು, ಸಂಸ್ಕೃತಿಗಳು, ಜೀವನಶೈಲಿಗಳಲ್ಲಿ ಬದುಕುವ ” ವಿವಿಧತೆಯಲ್ಲಿ ಏಕತೆ” ಸಾರುವ ಜಾತ್ಯಾತೀತ ಭಾರತದಲ್ಲಿ ಏಕ ನೀತಿ ಹೇರಿಕೆ ಅಸಾಧ್ಯ ಮತ್ತು ಅಸಂವಿಧಾನಿಕವಾಗಿದೆ. ಶಿಕ್ಷಣವನ್ನು ಕೇಸರೀಕರಣಗೊಳಿಸಲು ಮುಂದಾಗಿರುವ ಸರಕಾರದ ಆಲೋಚನೆಯು ಶಿಕ್ಷಣದ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ.
ಶಿಕ್ಷಣವೆಂಬುದು ದೇಶದ ಸಮವರ್ತಿ ವ್ಯಾಪ್ತಿಗೆ ಬರುವಂತಹದ್ದು, ವಿಕೇಂದ್ರೀಕರಣದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಾದೇಶಿಕತೆಗೆ ಹೆಚ್ಚು ಒತ್ತು
ಕೊಡುವ ಬಗ್ಗೆ ಸಂವಿಧಾನವೇ ಪ್ರತಿಪಾದಿಸುತ್ತದೆ. ಆದರೆ ಹೊಸದಾಗಿ ಜಾರಿಗೆ ತರಲು ಹೊರಟಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಉದ್ದೇಶಪೂರ್ವಕವಾಗಿಯೇ ಪ್ರಾದೇಶಿಕತೆಗೆ ಧಕ್ಕೆ ತರಲಿದೆ.
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಒಂದು ವರ್ಷಕ್ಕೆ ಸೀಮಿತಗೊಳಿಸಿ ಹಿಂದಿಯನ್ನು ಹಿಂಬದಿಯಿಂದ ಹೇರಿಸಿ ಹಿಂದುತ್ವ ಫ್ಯಾಶಿಸಂ ಮಾರಕ ಸಿದ್ಧಾಂತದ ಭಾಗವಾಗಿ ಈ ಎಲ್ಲಾ ಪ್ರಯತ್ನಗಳನ್ನು ಸರಕಾರವು ಮಾಡುತ್ತಿದೆ. ವೈಜ್ಞಾನಿಕ ದೂರದೃಷ್ಟಿ ಇಲ್ಲದೆ ಘೋಷಣೆಗಳಿಗೆ ಮಾತ್ರ ಸೀಮಿತವಾಗಿರುವ ಮತ್ತು ದೇಶದ ವೈವಿಧ್ಯತೆಗೆ ಬೆದರಿಕೆಯಾಗಿರುವ ಈ ಶಿಕ್ಷಣ ನೀತಿಯನ್ನು ಸೌಹಾರ್ದತೆಯ ಕರ್ನಾಟಕದ ಮಣ್ಣಿನಲ್ಲಿ ಕಾರ್ಯರೂಪಕ್ಕೆ ತರಲು ಕ್ಯಾಂಪಸ್ ಫ್ರಂಟ್ ಒಪ್ಪಲ್ಲ ಮತ್ತು ಇದು ಕೇವಲ ಬಂಡವಾಳಶಾಹಿ ಕಾರ್ಪೊರೇಟ್ ಕುಳಗಳ ಹಿತ ಕಾಪಾಡಲು ತಂದಿರುವ ನೀತಿಯಾಗಿದ್ದು ಇದನ್ನು ನಾವು ಸಂಪೂರ್ಣವಾಗಿ ತಿರಸ್ಕರಿಸಲಿದ್ದೇವೆ.
ಒಂದು ವೇಳೆ ನಮ್ಮ ಬೇಡಿಕೆಯನ್ನು ಪರಿಗಣಿಸದೇ ಈ ಪೊಳ್ಳು ಭರವಸಗಳ ಕರಡನ್ನು ರಾಜ್ಯ ಸರಕಾರವು ಜಾರಿಗೊಳಿಸಲು ಮುಂದಾದರೆ ಕ್ಯಾಂಪಸ್ ಫ್ರಂಟ್ ಈ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಶಿಕ್ಷಣದಲ್ಲಿ ಸಂವಿಧಾನದ ಮೂಲ ಆಶಯಗಳನ್ನು ಕಾಪಾಡಲಿಕ್ಕೆ ಬೇಕಾಗಿ ಇಂದು ಉನ್ನತ ಶಿಕ್ಷಣ ಸಚಿವರ ಕಛೇರಿಗೆ ಮಾರ್ಚ್ ಮಾಡುವ ಮೂಲಕ ಎಚ್ಚರಿಸಿದ್ದೇವೆ, ಸರಕಾರ ತನ್ನ ನಿಲುವು ಬದಲಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಹೋರಾಟವನ್ನು ಕ್ಯಾಂಪಸ್ ಫ್ರಂಟ್ ನಡೆಸಲಿದೆ ಎಂದು ಈ ಮೂಲಕ ಸರಕಾರಕ್ಕೆ ಹೇಳಲು ಬಯಸುತ್ತೇವೆ.

ರಾಜ್ಯಾಧ್ಯಕ್ಷರಾದ ಆಥಾವುಲ್ಲ ಪುಂಜಾಲಕಟ್ಟೆ, ಕಾರ್ಯದರ್ಶಿ ಸರ್ಪರಾಝ್ ಸೇರಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ
ಈ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮಾತಿಗೆ ಯಾವುದೇ ರೀತಿ ಸ್ಪಂದನೆ ಮಾಡದೆ ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷರಾದ ಆಥಾವುಲ್ಲ ಪುಂಜಾಲಕಟ್ಟೆ, ಕಾರ್ಯದರ್ಶಿ ಸರ್ಪರಾಝ್, ವಿದ್ಯಾರ್ಥಿನಿಯರನ್ನು ಹಾಗೂ 200ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ