janadhvani

Kannada Online News Paper

ಸಾವರ್ಕರ್ ಫೋಟೊ ಹೊತ್ತ ವಾಹನಕ್ಕೆ ತಡೆ- ಬಂಧನಕ್ಕೊಳಗಾದವರಿಗೆ ಜಾಮೀನು

ಪುತ್ತೂರು: ಕಬಕ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ದಿನದಂದು ಸಾವರ್ಕರ್ ಫೋಟೊ ಇದ್ದ ವಾಹನವನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.

ಕಬಕ ಗ್ರಾಮ ಪಂಚಾಯತ್ ವತಿಯಿಂದ ನಡೆಸಲಾಗಿದ್ದ ಸ್ವರಾಜ್ಯ ರಥ ಯಾತ್ರೆಯಲ್ಲಿ ಸಾವರ್ಕರ್ ಭಾವಚಿತ್ರವನ್ನು ಅಳವಡಿಸಿರುವುದನ್ನು ಆಕ್ಷೇಪಿಸಿದ ಇವರು, ರಥ ಯಾತ್ರೆ ತಡೆದು ಪ್ರತಿಭಟನೆ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪಂಚಾಯತ್ ವತಿಯಿಂದ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿತ್ತು. ದೂರಿನಂತೆ ಪೊಲೀಸರು 7 ಮಂದಿಯ ವಿರುದ್ಧ ಕೇಸು ದಾಖಲಿಸಿಕೊಂಡಿದ್ದು, ಕಬಕ ನಿವಾಸಿಗಳಾದ ಅಝೀಝ್, ಶಮೀರ್ ಮತ್ತು ಕುಡಿಪ್ಪಾಡಿ ನಿವಾಸಿ ಅಬ್ದುಲ್ ರಹಿಮಾನ್ ಎಂಬವರನ್ನು ಬಂಧಿಸಿದ್ದರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

ಇವರ ಪರವಾಗಿ ವಕೀಲರಾದ ಅಶ್ರಫ್ ಅಗ್ನಾಡಿ, ಮಜೀದ್ ಖಾನ್, ಅಬ್ದುಲ್ ರಹಿಮಾನ್, ಮುಸ್ತಫಾ ವಾದಿಸಿದ್ದರು

error: Content is protected !! Not allowed copy content from janadhvani.com