janadhvani

Kannada Online News Paper

ರಾಜ್ಯ ಮಟ್ಟದ ಭಾಷಣ ಸ್ಪರ್ಧೆ :ಕಡಬ ಸಮ್ಯಕ್ತ್ ಜೈನ್ ತೃತೀಯ

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಛಾತ್ರ ಯುವ ಸಂಘರ್ಷ ಸಮಿತಿ ಕರ್ನಾಟಕ ವತಿಯಿಂದ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಿತ್ತು .ಇದರಲ್ಲಿ ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಸಮ್ಯಕ್ತ್ ಜೈನ್ ರವರು ತೃತೀಯ ಸ್ಥಾನವನ್ನು ಪಡೆದು ಸಂಸ್ಥೆಯಿಂದ ಕೊಡಲ್ಪಡುವ ಪುರಸ್ಕಾರಕ್ಕೆ ಭಾಜನರಾಗಿರುತ್ತಾರೆ.

ಕವಿ ,ಸಾಹಿತಿ,ಕಾರ್ಯಕ್ರಮದ ನಿರೂಪಕ,ವಾಗ್ಮಿಯಾಗಿ ,ಅಭಿನಯಕಾರರಾಗಿ ಗುರುತಿಸಿಕೊಂಡಿರುವ ಇವರು ಪ್ರಸ್ತುತ ಸಾಫಿಯೆನ್ಶಿಯಾ ಬೆಥನಿ ಕಾಲೇಜು ನೆಲ್ಯಾಡಿಯಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಮುಂದುವರೆಸುತ್ತಿರುವ ಇವರು ಹೊಸಂಗಡಿ ಬಸದಿ ಶ್ರೀ ಧರಣೇಂದ್ರ ಇಂದ್ರ ಮತ್ತು ಮಂಜುಳಾ ದಂಪತಿಯ ಸುಪುತ್ರ.