ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.
ಆರೋಪಿಗಳನ್ನು ತಮಿಳುನಾಡಿನಿಂದ ಬಂಧಿಸಿ ಮೈಸೂರಿಗೆ ಕರೆದುಕೊಂಡು ಬಂದ ಬಳಿಕ ಶನಿವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಒಟ್ಟು ಆರು ಮಂದಿ ಆರೋಪಿಗಳಿದ್ದು, ಇವರೆಲ್ಲರೂ ತಮಿಳುನಾಡಿನ ತಿರ್ಪೂರ್‌ನವರು. ಇವರಲ್ಲಿ ಐವರನ್ನು ಬಂಧಿಸಲಾಗಿದ್ದು, ಒಬ್ಬ ನಾಪತ್ತೆಯಾಗಿದ್ದಾನೆ. ಬಂಧಿತ ಐವರಲ್ಲಿ ಒಬ್ಬಾತ ಬಾಲಾಪರಾಧಿಯಾಗಿದ್ದಾನೆ. ಆತನ ವಯಸ್ಸು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಆರೋಪಿಗಳೆಲ್ಲರೂ ಕಾರ್ಮಿಕರಾಗಿದ್ದಾರೆ. ಚಾಲಕ, ವೈರಿಂಗ್, ಗಾರೆ ಕೆಲಸದವರು, ಮರಗೆಲಸ ಮಾಡುವವರು ಆರೋಪಿಗಳಲ್ಲಿದ್ದಾರೆ. ಒಬ್ಬ ಅನಕ್ಷರಸ್ಥ, ಇಬ್ಬರು ಏಳನೇ ತರಗತಿ ಓದಿದವರು ಇದ್ದಾರೆ. ಬಂಡಿಪಾಳ್ಯಕ್ಕೆ ತರಕಾರಿ ತರುವ ವಾಹನದವರು ಸ್ನೇಹಿತರನ್ನೂ ಕರೆದುಕೊಂಡು ಬರುತ್ತಾರೆ. ಹಾಗೆಯೇ ಇವರೂ ಮೈಸೂರಿಗೆ ಬಂದಿದ್ದರು. ಬಂದಾಗ ಅವರು ಪಾರ್ಟಿ ಮಾಡುವುದು ಸಾಮಾನ್ಯ ಚಟುವಟಿಕೆ. ಇಂತಹದೇ ಪಾರ್ಟಿ ವೇಳೆ ಅತ್ಯಾಚಾರ ಎಸಗಿದ್ದಾರೆ ಎಂದು ಮಾಹಿತಿ ನೀಡಿದರು.
’’ಪ್ರಕರಣವನ್ನು ಭೇದಿಸಲು ಏಳು ತಂಡಗಳನ್ನು ರಚಿಸಿ, ಕಾರ್ಯಾಚರಣೆಗೆ ಇಳಿಸಲಾಗಿತ್ತು. ಸಂತ್ರಸ್ಥೆಯಿಂದ ಯಾವುದೇ ಹೇಳಿಕೆ ಸಿಕ್ಕಿಲ್ಲ. ಆಕೆಯ ಸ್ನೇಹಿತನಿಂದ ಸ್ವಲ್ಪ ಮಾಹಿತಿ ಸಿಕ್ಕಿತ್ತು. ಆದರೆ ಅದು ಅಪೂರ್ಣವಾಗಿತ್ತು. ಬಳಿಕ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದೆವು. ಆಗ ಆರೋಪಿಗಳು ಸಿಕ್ಕಿ ಬಿದ್ದರು. ನನಗೆ ಇದನ್ನು ಘೋಷಣೆ ಮಾಡೋಕೆ ಖುಷಿ ಆಗ್ತಿದೆ ಅಂತ ಹೇಳೋಕೆ ಆಗಲ್ಲ. ಈ ಕೇಸ್ನಲ್ಲಿ ಒಟ್ಟು 5 ಮಂದಿಯನ್ನು ಬಂಧಿಸಲಾಗಿದೆ. ಹೈಕೋರ್ಟ್ ಆರ್ಡರ್ ಆಗಿರುವ ಕಾರಣಕ್ಕೆ ಈ ಸಂಬಂಧ ಹೆಚ್ಚು ಹೇಳಲು ಸಾಧ್ಯವಿಲ್ಲ’’ ಎಂದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ