ಬೆಂಗಳೂರು,ಆಗಸ್ಟ್.30: “9 ರಿಂದ 12 ನೇ ತರಗತಿವರೆಗೆ ಶಾಲೆ ಆರಂಭಿಸಲಾಗಿದೆ. ಆದರೆ, ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳನ್ನು ತೆರೆಯಲಾಗಿಲ್ಲ. ಹೀಗಾಗಿ ಪಾಸಿಟಿವಿಸಿ ದರ ಶೇ. 2 ಕ್ಕಿಂತ ಕಡಿಮೆಇರುವ ತಾಲೂಕುಗಳಲ್ಲಿ 6,7,8 ನೇ ತರಗತಿಗಳನ್ನು ಸೆಪ್ಟೆಂಬರ್ 6ನೇ ತಾರೀಖಿನಿಂದ ಆರಂಭಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ದಿನ ಬಿಟ್ಟು ದಿನ ಮಾತ್ರ ತರಗತಿಗಳು ನಡೆಯಲಿದ್ದು, ಶೇ. 50 ರಷ್ಟು ಹಾಜರಾತಿಗೆ ಮಾತ್ರ ಅವಕಾಶ ನೀಡಲಾಗಿದೆ. ವಾರದಲ್ಲಿ 5ದಿನ ಮಾತ್ರ ತರಗತಿಗಳು ನಡೆಯಲಿದ್ದು, ವಾರದಲ್ಲಿ 2 ದಿನ ಶುಚಿಗೊಳಿಸಲು ಅವಕಾಶ ನೀಡಲಾಗಿದೆ. ಪ್ರತಿ ದಿನ ತರಗತಿ ನಡೆಯುತ್ತದೆ. ಮೊದಲ ದಿನ ಶೇ. 50 ಮತ್ತು ಮರುದಿನ ಶೇ.50 ರಷ್ಟು ಹಾಜರಾತಿ ಇರಲಿದೆ. ಶನಿವಾರ ಮತ್ತು ಭಾನುವಾರ ಸ್ಯಾನಿಟೈಸ್ ಮಾಡಲು ಮೀಸಲಿರಿಸಲಾಗಿದೆ.
ಶಾಲೆಗಳನ್ನು ಪುನಃ ತೆರೆಯಲು ಪೋಷಕರು ಮತ್ತು ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ಸಿಕ್ಕಿದೆ. 6472 ಮಕ್ಕಳಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು 14 ವಿದ್ಯಾರ್ಥಿಗಳಿಗೆ ಮಾತ್ರ ಪಾಸಿಟಿವ್ ಬಂದಿದೆ. ಹೀಗಾಗಿ ಶಾಲೆಗಳನ್ನು ತೆರೆಯುವುದರಿಂದ ಮಕ್ಕಳ ಆರೋಗ್ಯದ ವಿಚಾರದಲ್ಲಿ ಯಾವುದೇ ಆತಂಕ ಇಲ್ಲ. ಅಲ್ಲದೆ, ಶಿಕ್ಷಕರಿಗೂ ಲಸಿಕೆ ಹಾಕಿಸಲಾಗಿದೆ. 2.61 ಲಕ್ಷ ಶಿಕ್ಷಕರ ಪೈಕಿ 1.10 ಲಕ್ಷ ಶಿಕ್ಷಕರಿಗೆ ಎರಡು ಡೊಸ್ ಲಸಿಕೆ ನೀಡಲಾಗಿದೆ” ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ಹಿರಿಯ ಸಚಿವರ ಮತ್ತು ಅಧಿಕಾರಿಗಳ ಸಭೆ ಕರೆದಿದ್ದರು. ಈ ಸಭೆಯಲ್ಲಿ ಅನೇಕ ಪ್ರಮುಖ ಅಂಶಗಳ ಕುರಿತು ಚರ್ಚೆ ನಡೆಸಲಾಗಿದೆ. ಈ ಅಂಶಗಳನ್ನು ಸಚಿವ ಆರ್. ಅಶೋಕ್ ಮಾಧ್ಯಮಗಳ ಎದುರು ಪ್ರಸ್ತುತಪಡಿಸಿದ್ದಾರೆ.
“ಓನಂ ಹಬ್ಬದ ನಂತರ ಕೇರಳದಲ್ಲಿ ಕೊರೋನಾ ವೈರಸ್ (CoronaVirus) ಪಾಸಿಟಿವ್ ಸಂಖ್ಯೆ ಅಧಿಕವಾಗುತ್ತಿದ್ದು, ಇದು ಕರ್ನಾಟಕಕ್ಕೂ ಆಘಾತ ನೀಡುವ ಸಾಧ್ಯತೆ ಇದೆ. ಹೀಗಾಗಿ ಕೇರಳ (Kerala) ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲದೆ, ಕೇರಳದಿಂದ ಕರ್ನಾಟಕಕ್ಕೆ (Karnataka) ಆಗಮಿಸುವ ವಿದ್ಯಾರ್ಥಿಗಳಿಗೆ ಕಡ್ಡಾಯ 1 ವಾರದ ಕ್ವಾರಂಟೈನ್ ಇರಲಿದ್ದು, ಕೊರೋನಾ ಸೋಂಕು ರಾಜ್ಯದಲ್ಲೂ ವ್ಯಾಪಿಸುವುದನ್ನು ತಡೆಯುವ ಸಲುವಾಗಿ ಹಲವು ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂವನ್ನು ಮುಂದುವರೆ ಸಲು ತೀರ್ಮಾನಿಸಲಾಗಿದೆ.
ಆದರೆ, ಮೂರನೇ ಅಲೆಯ ಆತಂಕದ ನಡುವೆ ಕರ್ನಾಟಕದಲ್ಲೂ ಹಬ್ಬದ ಆಚರಣೆಯಲ್ಲಿ ಎಚ್ಚರಿಕೆ ನಡೆಯನ್ನು ಇಡಬೇಕಾಗಿದೆ. ಚಿತ್ರದುರ್ಗ, ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ದೊಡ್ಡಮಟ್ಟದಲ್ಲಿ ಗಣೇಶ ಹಬ್ಬ ಆಚರಿಸಲಾಗುತ್ತದೆ. 30 ಕಡೆ ಅತೀ ಹೆಚ್ಚಿನ ಜನ ಸೇರುತ್ತಾರೆ. ಈ ವೇಳೆ ಕೊರೋನಾ ಸೋಂಕು ಹರಡುವ ಸಾಧ್ಯತೆ ಅಧಿಕವಾಗಿರುತ್ತದೆ. ಹೀಗಾಗಿ ಸಂಘಟಕರ ಜೊತೆ ಒಂದು ಸುತ್ತಿನ ಮಾತುಕತೆ ಮಾಡಲಾಗುವುದು.
ಪೊಲೀಸರ ಬಳಿ ಎಲ್ಲ ಸಂಘಟಕರ ಮಾಹಿತಿ ಇದೆ. 5ನೇ ತಾರೀಖು ಸಿಎಂಮತ್ತೊಂದು ಸಭೆ ನಡೆಸುತ್ತಾರೆ. ಅನೇಕರು ಹಬ್ಬದ ಆಚರಣೆಗೆ ಅವಕಾಶ ನೀಡಲು ಮನವಿ ಮಾಡಿದ್ದರು. ಕೋವಿಡ್ ಹೆಚ್ಚಾಗದಂತೆ ಎಚ್ಚರಿಕೆ ವಹಿಸಿ ಅನುಮತಿ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಗಣೇಶ ಚತುರ್ಥಿ ಆಚರಣೆಗೆ ಷರತ್ತು ಬದ್ಧ ಅನುಮತಿ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ, “ಕೇರಳದಲ್ಲಿ ಕೊರೋನಾ ಹೆಚ್ಚಾಗಿದ್ದರಿಂದ ಗಡಿ ಜಿಲ್ಲೆ ಮಂಗಳೂರು, ಕೊಡಗು ಜಿಲ್ಲೆಯಲ್ಲಿ ನಿರ್ಬಂಧ ಮುಂದುವರಿಕೆಯಾಗಲಿದೆ. ಮದುವೆ ಸಮಾರಂಭಕ್ಕೆ ಷರತ್ತು ಬದ್ಧ ಕಲ್ಯಾಣ ಮಂಟಪ ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಅನುಮತಿ ನೀಡಲಾಗಿದೆ. ಆದರೆ ಮದುವೆಗೆ 400ಕ್ಕಿಂತ ಮೀರಬಾರದು” ಎಂದು ಸಚಿವ. ಆರ್. ಅಶೋಕ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ