ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪ್ರೌಢ ಶಾಲಾ ವಿಭಾಗದ ದೈಹಿಕ ಶಿಕ್ಷಕರಾದಂತಹ ಗೀತಾಮಣಿ ಎ. ಸ್ ರವರಿಗೆ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಪ್ರಶಸ್ತಿಯು ಪುತ್ತೂರು ತಾಲೂಕು ಹಾಗೂ ಕೊಂಬೆಟ್ಟು ಪ್ರೌಢ ಶಾಲೆಗೆ ಕೀರ್ತಿಯನ್ನು ತಂದಿದ್ದು, ನಿಮ್ಮ ಶಿಕ್ಷಕ ವೃತ್ತಿಯು ಇತರರಿಗೆ ಮಾದರಿಯಾಗಲಿ ಎಂದು ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಕಾರ್ಯದರ್ಶಿ ಮುಸ್ತಾಫ ಕೊಡಿಪ್ಪಾಡಿ, ಜೊತೆ ಕಾರ್ಯದರ್ಶಿ ಫಾರೂಕ್ ಕಬಕ, ಜಿಲ್ಲಾ ಸಮಿತಿ ಸದಸ್ಯರಾದ ಶಮ್ಮಾಸ್ ಬನ್ನೂರ್, ರಫೀಕ್ ಕೆಮ್ಮಾಯಿ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.