ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಕುರ್ಮಾ ರಾವ್ ಅವರನ್ನು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ನಿಯೋಗವು ಭೇಟಿ ನೀಡಿ ಸ್ವಾಗತಿಸಲಾಯಿತು.
ಉಡುಪಿ ಜಿಲ್ಲೆಗೆ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜ್ ಬೇಡ, ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್ ಅಕ್ರಮ್, ಜಿಲ್ಲಾ ಸಮಿತಿ ಸದಸ್ಯ ಅರ್ಫಾಝ್ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.