janadhvani

Kannada Online News Paper

ಭಾರತ್ ಬಂದ್‌ :ವ್ಯಾಪಕ ಹಿಂಸಾಚಾರದಲ್ಲಿ ಏಳು ಮಂದಿ ಮೃತ್ಯು

ನವದೆಹಲಿ: ದಲಿತ ಸಂಘಟನೆಗಳು ಸೋಮವಾರ ದೇಶದಾದ್ಯಂತ ನಡೆಸಿರುವ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ. ಪೊಲೀಸರು ಸೇರಿ ಹಲವರು ಗಾಯಗೊಂಡಿದ್ದಾರೆ.

ಎಸ್‌ಸಿ, ಎಸ್‌ಟಿ ಕಾಯ್ದೆ ದುರ್ಬಲಗೊಳಿಸುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಭಾರತ್ ಬಂದ್‌ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಗೆ ಸಾಕ್ಷಿಯಾಯಿತು. ಮಧ್ಯ ಪ್ರದೇಶದ ಗ್ವಾಲಿಯರ್‌ ಮತ್ತು ಭಿಂದ್‌ನಲ್ಲಿ ನಾಲ್ಕು ಮಂದಿ, ಮುರೇನಾದಲ್ಲಿ ಒಬ್ಬ ಪ್ರತಿಭಟನಾಕಾರ ಮೃತಪಟ್ಟಿರುವುದಾಗಿ ಮಧ್ಯಪ್ರದೇಶ ಐಜಿ ಮಾಹಿತಿ ನೀಡಿದ್ದಾರೆ. ಇನ್ನು ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಇಬ್ಬರು ಪ್ರತಿಭಟನಾಕಾರು ಸಾವಿಗೀಡಾಗಿರುವುದಾಗಿ ಹಿಂದುಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಹರಿಯಾಣದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಉತ್ತರ ಪ್ರದೇಶದ ಅಝಮ್‌ಗಢದಲ್ಲಿ ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯ ಬಸ್‌ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಲಾಗಿದೆ. ಮುಝಾಫರ್‌ನಗರದಲ್ಲಿ ರಸ್ತೆ ಬದಿಯಲ್ಲಿ ಅನೇಕ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ.

ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ 19ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ 6ರ ವರೆಗೂ ಇಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿದೆ.

ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ–1989 ಸಂಬಂಧಿಸಿದಂತೆ ನೀಡಿದ್ದ ತೀರ್ಪಿನ ಮರುಪರಿಶೀಲನೆಗೆ ಸಲ್ಲಿಸಲಾದ ಮನವಿಯ ಶೀಘ್ರ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಅಸಮ್ಮತಿಸಿದೆ.

error: Content is protected !! Not allowed copy content from janadhvani.com