ಅರಿವು ಶೈಕ್ಷಣಿಕ ಸಾಲ ನವೀಕರಣವನ್ನು ನಿಲ್ಲಿಸಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಸರಕಾರಿ ನಿಗಮ ಕೆಎಂಡಿಸಿಯ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ಅಯೂಬ್ ಅಗ್ನಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಕ್ಷೇತ್ರವು ದುಬಾರಿಯಾಗಿ ಪರಿಣಮಿಸುತ್ತಿರುವ ಈ ಸನ್ನಿವೇಶದಲ್ಲಿ ಉನ್ನತ ಶಿಕ್ಷಣದ ಕನಸು ಹೊತ್ತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಈ ನಿಗಮದಿಂದ ದೊರಕುತ್ತಿದ್ದ ಸಾಲ ಯೋಜನೆಯು ಬಹಳಷ್ಟು ನೆರವಾಗುತ್ತಿತ್ತು. ಆದರೆ ಸರಕಾರವು ಅಲ್ಪಸಂಖ್ಯಾತರ ನಿಗಮದ ಮೂಲಕ ನೀಡುತ್ತಿದ್ದ ಶೈಕ್ಷಣಿಕ ನೆರವಿನ ಅನುದಾನವನ್ನು ನಿಧಾನವಾಗಿ ಕಡಿತಗೊಳಿಸುತ್ತಾ ಬರುತ್ತಿದೆ. ಈ ಹಿಂದೆ ಪಿ.ಎಚ್.ಡಿ ಮತ್ತು ಎಂ.ಫಿಲ್. ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್ ಮೊತ್ತವನ್ನೂ ಕೋವಿಡ್ ನೆಪವೊಡ್ಡಿ ಕಡಿತಗೊಳಿಸಲಾಗಿತ್ತು. ಇವೆಲ್ಲವೂ ಅಲ್ಪಸಂಖ್ಯಾತ ಸಮಯದಾಯಗಳನ್ನು ಉನ್ನತ ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರವಾಗಿದೆ.
ಪ್ರಿ ಮೆಟ್ರಿಕ್- ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ ಮೊತ್ತವೂ ಸಮರ್ಪಕವಾಗಿ ದೊರಕುತ್ತಿಲ್ಲ ಎಂಬ ದೂರುಗಳು ವ್ಯಾಪಕವಾಗಿವೆ. ರಾಜ್ಯದ ಬಿಜೆಪಿ ಸರಕಾರವು ತಾಳುತ್ತಿರುವ ಈ ರೀತಿಯ ಅಲ್ಪಸಂಖ್ಯಾತ ವಿರೋಧಿ ಧೋರಣೆಯು ಎಲ್ಲರನ್ನೊಳಗೊಂಡ ಅಭಿವೃದ್ಧಿಗೆ ಮಾರಕವಾಗಿದೆ.
ಅರಿವು ಶೈಕ್ಷಣಿಕ ಸಾಲವನ್ನು ತಡೆ ಹಿಡಿಯುವುದರಿಂದ ಅಲ್ಪಸಂಖ್ಯಾತ ಸಮುದಾಯದ ಸಾವಿರಾರು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ಕಮರಿ ಹೋಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ತಾರತಮ್ಯ ನೀತಿಯನ್ನು ಕೈಬಿಟ್ಟು ಸಂವಿಧಾನದ ಆಶಯದಡಿಯಲ್ಲಿ ಕಾರ್ಯ ನಿರ್ವಹಿಸಲು ಮುಂದಾಗಬೇಕು. ಅದೇ ರೀತಿ ವಿದ್ಯಾರ್ಥಿ ಸಮುದಾಯವೂ ಪ್ರಜಾಸತ್ತಾತ್ಮಕ ಹೋರಾಟಗಳ ಮೂಲಕ ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕೆಂದು ಅಯೂಬ್ ಅಗ್ನಾಡಿ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ