janadhvani

Kannada Online News Paper

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊ. ಹಾಶೀರ್ ಪೇರಿಮಾರ್ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪುದು ಗ್ರಾ.ಪಂ ಸದಸ್ಯ ಹಾಶೀರ್ ಪೇರಿಮಾರ್ ಅವರನ್ನು ನೇಮಕಗೊಳಿಸಲಾಗಿದೆ.

ಮಾಜಿ ಸಚಿವ, ಮಂಗಳೂರು ಶಾಸಕರಾದ ಯು.ಟಿ ಖಾದರ್ ಅವರ ನಿರ್ದೇಶನದಂತೆ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಂ ಎಸ್ ರಕ್ಷಾ ರಾಮಯ್ಯ ಅವರು ಹಾಶೀರ್ ಪೇರಿಮಾರ್ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಇವರು ಪುದು ಗ್ರಾಮ ಸಮಿತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಪುದು ಗ್ರಾ.ಪಂ ಉಪಾಧ್ಯಕ್ಷರಾಗಿ, ಎರಡು ಬಾರಿ ಗ್ರಾ.ಪಂ ಸದಸ್ಯರಾಗಿ, ಮಂಗಳೂರು ವಿ.ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ಚುನಾಯಿತ ಪ್ರಧಾನ ಕಾರ್ಯದರ್ಶಿಯಾಗಿ, 𝐔𝐓𝐊 ಕೋವಿಡ್-19 ಹೆಲ್ಪ್ ಲೈನ್ ತಂಡದ ಸದಸ್ಯರಾಗಿ ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು ರಾಜಕೀಯದ ಜೊತೆ ಸಮಾಜಿಕವಾಗಿಯೂ, ಧಾರ್ಮಿಕವಾಗಿಯೂ ಗುರುತಿಸಿಕೊಂಡಿದ್ದಾರೆ.error: Content is protected !! Not allowed copy content from janadhvani.com