ಬಂಟ್ವಾಳ,ಸೆ.27: ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆದಿರುವ ಭಾರತ ಬಂದ್ ಗೆ ಬೆಂಬಲ ಸೂಚಿಸಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ, ಬೀದಿ ನಾಟಕ ಹಾಗು ರಸ್ತೆ ತಡೆಗೆ ಯತ್ನಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಾದತ್ ಬಜತ್ತೂರು, ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್ ಮತ್ತು ರಾಜ್ಯ ಮುಖಂಡ ಅಕ್ಬರ್ ಪೊನ್ನೋಡಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ರೈತ ಮುಖಂಡ ರಹಿಮಾನ್ ಆಲಾಡಿ,ಜಿಲ್ಲಾ ಸಮಿತಿ ಸದಸ್ಯ ಯೂಸುಫ್ ಆಲಡ್ಕ, SDTU ದಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲಿಕ್ ಕೊಳಕೆ, ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಮೂನಿಶ್ ಆಲಿ, ಉಪಾಧ್ಯಕ್ಷ ಖಲಂದರ್ ಪರ್ತಿಪಾಡಿ, ಹಮೀದ್ ಆಲಿ, ಮುಬಾರಕ್ ಗೂಡಿನಬಳಿ ಮತ್ತು ಪಕ್ಷದ ಕ್ಷೇತ್ರ, ಪುರಸಭೆ ಮತ್ತು ಬ್ಲಾಕ್ ಮಟ್ಟದ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


