ನವದೆಹಲಿ: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಹರಸಾಹಸಕ್ಕೆ ಕೊನೆಗೂ ಮುಕ್ತಿ ದೊರೆತಿದ್ದು, ಟಾಟಾ ಸಮೂಹ ಹರಾಜಿನಲ್ಲಿ ಏರ್ ಇಂಡಿಯಾವನ್ನು ಖರೀದಿ ಮಾಡಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.
ಇಂದು ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಬಿಡ್ ನಡೆಸಲಾಗಿದ್ದು,ಈ ಬಿಡ್ ನಲ್ಲಿ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದವು. ಅಂತಿಮವಾಗಿ ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್ ಸಂಸ್ಥೆ ಖರೀದಿಸುವಲ್ಲಿ ಸಫಲವಾಗಿದೆ ಎಂದು ಬ್ಲೂಮರ್ಗ್ ವರದಿ ಮಾಡಿದೆ.ಈ ಬಗ್ಗೆ ಸುದ್ದಿಸಂಸ್ಥೆಗಳು ವರದಿ ಮಾಡಿದ್ದು, ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್ ಸಂಸ್ಥೆ ಬಹುದೊಡ್ಡ ಮೊತ್ತ ನೀಡಿ ಖರೀದಿ ಮಾಡಿದೆ ಎನ್ನಲಾಗಿದೆ.
ಆದರೆ ಈ ವರದಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ. ಏರ್ ಇಂಡಿಯಾ ಮಾರಾಟ ಸಂಬಂಧಿತ ವಿವರಗಳನ್ನು ಮತ್ತೆ ಪ್ರಕಟಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಹಳೆಯ ಮಾಲೀಕನನ್ನೇ ಸೇರಿದ ಏರ್ ಇಂಡಿಯಾ
ಇನ್ನು ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ನದ್ದೇ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿದ್ದರು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು ಮತ್ತು ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಯಿತು ಮತ್ತು ಜುಲೈ 29, 1946 ರಂದು ಏರ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು.
1953 ರಲ್ಲಿ, ಸರ್ಕಾರವು ಏರ್ ಕಾರ್ಪೊರೇಷನ್ ಕಾಯ್ದೆಯನ್ನು ಅಂಗೀಕರಿಸಿತು ಮತ್ತು ಕಂಪನಿಯ ಸ್ಥಾಪಕ ಜೆಆರ್ ಡಿ ಟಾಟಾ ಅವರಿಂದ ಮಾಲೀಕತ್ವದ ಹಕ್ಕುಗಳನ್ನು ಖರೀದಿಸಿತು. ನಂತರ ಈ ಕಂಪನಿಯನ್ನು ಏರ್ ಇಂಡಿಯಾ ಇಂಟರ್ ನ್ಯಾಷನಲ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಯಿತು. ಹೀಗಾಗಿ ಟಾಟಾ ಗ್ರೂಪ್ 68 ವರ್ಷಗಳ ನಂತರ ಮತ್ತೊಮ್ಮೆ ತನ್ನ ಸ್ವಂತ ಕಂಪನಿಯನ್ನು ಹಿಂತೆಗೆದುಕೊಂಡಂತಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ