janadhvani

Kannada Online News Paper

ಅತಿಥಿ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಕ್ಯಾಂಪಸ್ ಫ್ರಂಟ್ ಒತ್ತಾಯ

ಪುತ್ತೂರು: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುವ ಅತಿಥಿ ಶಿಕ್ಷಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ವತಿಯಿಂದ ಉಪ ತಹಶೀಲ್ದಾರ್‌ರವರಿಗೆ ಮನವಿ ಸಲ್ಲಿಸಲಾಯಿತು.

ಸಮಾಜದಲ್ಲಿ ತಮ್ಮದೇ ಆದ ರೀತಿಯಲ್ಲಿ ಕೊಡುಗೆಯನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರು ಬೀದಿ ಪಾಲಾಗಿದ್ದಾರೆ. ಲಾಕ್‌ಡೌನ್‌ ನಂತರ ಸರಿಯಾದ ವೇತನ ಪಾವತಿಯಾಗದೆ ಪರಿತಪಿಸುತ್ತಿದ್ದಾರೆ. ಕಳೆದ 18 ತಿಂಗಳುಗಳಿಂದ ಯಾವುದೇ ವರಮಾನವಿಲ್ಲದೆ ತಮ್ಮ ಜೀವನೋಪಾಯಕ್ಕಾಗಿ ದಿನಗೂಲಿ ಮಾಡುತ್ತಿದ್ದಾರೆ ಹಾಗಾಗಿ ಸರ್ಕಾರ ಈ ಎಲ್ಲಾ ಸಮಸ್ಯೆಯನ್ನು ಮನಗಂಡು ಅತಿಥಿ ಶಿಕ್ಷಕರನ್ನು ಖಾಯಂ ಆಗಿ ಭಡ್ತಿ ನೀಡಬೇಕು. ಬಾಕಿ ವೇತನ ಬಿಡುಗಡೆಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಮುಸ್ತಾಫ ಕೊಡಿಪ್ಪಾಡಿ ಸಮಿತಿ ಸದಸ್ಯರಾದ ಫಾರೂಕ್ ಕಬಕ,ಸಮ್ಮಾಸ್ ಬನ್ನೂರು ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.