ಬೆಂಗಳೂರು: ರಾಜ್ಯದಲ್ಲಿ 6 ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗಿನ ಎಲ್ಲ ವಿದ್ಯಾರ್ಥಿಗಳಿಗೂ ಶಾಲೆ ಕಾಲೇಜುಗಳ ಭೌತಿಕ ತರಗತಿ ಆರಂಭವಾಗಿದೆ. ಶಾಲೆ ತೆರೆಯಲು ಉಳಿದಿದ್ದು 1 ರಿಂದ 5 ತರಗತಿ ಮಕ್ಕಳಿಗೆ ಮಾತ್ರ. ಇದೀಗ ಈ ತರಗತಿಗಳಿಗೆ ಶಾಲೆ ಓಪನ್ ಮಾಡುವ ದಿನಾಂಕ ಸನ್ನಿಹಿತವಾಗಿದೆ.
1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ದಸರಾ ರಜೆ ಮುಗಿದ ನಂತರ ಶಾಲೆ ಓಪನ್ ಮಾಡಲು ಚಿಂತಿಸಲಾಗಿದೆ. ಆದರೆ ಕೊರೊನಾ ತಾಂತ್ರಿಕ ಸಮಿತಿ ಅನುಮತಿ ನೀಡಿದಲ್ಲಿ ಮಾತ್ರ ಶಾಲೆ ತೆರೆಯಲಾಗುತ್ತದೆ. ಒಂದು ವೇಳೆ ಅನುಮತಿ ನೀಡದಿದ್ದಲ್ಲಿ, 3, 4, 5 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ತೆರೆಯಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಳ್ಳಲಾಗುತ್ತದೆ. ಅದು ಸಹ ದಸರಾ ರಜೆ ನಂತರವೇ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
ದಸರಾ ರಜೆ ನಂತರ 1ನೇ ತರಗತಿ ಮತ್ತು 2ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ತೆರೆಯಲು ಅವಕಾಶ ನೀಡದಿದ್ದರೆ ನವೆಂಬರ್ ಆರಂಭದಿಂದ ಶಾಲೆ ಓಪನ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಝಐಫಾ ಫರಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಬಾಮಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ