janadhvani

Kannada Online News Paper

ಕಾರು ಚಲಾಯಿಸಿ ರೈತರ‌ ಹತ್ಯೆ: ಸಾಂತ್ವನ ಹೇಳಲು ತೆರಳಿದ್ದ ಪ್ರಿಯಾಂಕಾ ಗಾಂಧಿ ಬಂಧನ- ಕಾಂಗ್ರೆಸ್ ಖಂಡನೆ

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಹಿಂಸಾಚಾರದಲ್ಲಿ ಮೃತ ರೈತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ತೆರಳಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಯುಪಿಯಲ್ಲಿ ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ ಎಂದಿದ್ದಾರೆ.. ಪ್ರತಿರೋಧ- ಭಿನ್ನಾಭಿಪ್ರಾಯವನ್ನು ಸಹಿಸದ ಬಿಜೆಪಿ ಸರ್ಕಾರ
ತನ್ನ ತಾಲಿಬಾನಿ‌ ಮನಸ್ಥಿತಿಯನ್ನು ಬತ್ತಲು‌ ಮಾಡಿಕೊಳ್ಳುತ್ತಿದೆ.

ರೈತರ‌ ಹತ್ಯೆ ನಡೆದ ಸ್ಥಳಕ್ಕೆ ಭೇಟಿ‌ ನೀಡಲು ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ಕೃತ್ಯ ಖಂಡನೀಯ ಎಂದಿದ್ದಾರೆ.

ಉತ್ತರಪ್ರದೇಶದ ಗೂಂಡಾ ರಾಜ್ಯದಲ್ಲಿ ದಲಿತರು,ರೈತರು,‌ ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದು‌ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿಗಳು‌ ಮಧ್ಯಪ್ರವೇಶಿಸಿ
ಅಲ್ಲಿನ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ರೈತರು ತನ್ನ ಶತ್ರುಗಳೆಂದು ತಿಳಿದುಕೊಂಡಿರುವ ಶತ್ರುಗಳು ಎಂದು ಅವರನ್ನು ಪೋಲಿಸರ ಮೂಲಕ ದಮನಿಸಲು ಪ್ರಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ನಡೆಸಲು ಹೊರಟಿದೆ. ಉತ್ತರಪ್ರದೇಶದಲ್ಲಿ ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್, ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದಕೊಂಡ ಕ್ರಮ ಕಾನೂನುಬಾಹಿರ ಎಂದಿದ್ದಾರೆ. ರೈತರ ಸಾವಿಗೆ ಹೊಣೆಗಾರರ ವಿರುದ್ಧ ಕಾನೂನು ಕ್ರಮ ಜರುಗಿಸುವ ಬದಲು, ನ್ಯಾಯ ಕೇಳುವವರನ್ನು ನೀವು ಬಂಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !! Not allowed copy content from janadhvani.com