janadhvani

Kannada Online News Paper

ರೈತರ ಹತ್ಯೆ: ಯಾರನ್ನು ಬಂಧಿಸಿದ್ದೀರಿ?- ಯುಪಿ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ನವದೆಹಲಿ: ಲಖಿಂಪುರಖೇರಿಯಲ್ಲಿ ನಡೆದದ್ದು ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ (Supreme Court)  ಹೇಳಿದೆ. ಉತ್ತರಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಗುರುವಾರ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್ .ವಿ. ರಮಣ ನೇತೃತ್ವದ ನ್ಯಾಯಪೀಠ, ಹಿಂಸಾಚಾರ ಘಟನೆಯಲ್ಲಿ “ಯಾರ ಹೆಸರಿನಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಮತ್ತುಎಫ್ಐಆರ್ ದಾಖಲಿಸಿದ ಯಾರನ್ನಾದರೂ ಬಂಧಿಸಿದ್ದೀರಾ” ಎಂದು ನ್ಯಾಯಾಲಯ ಸರ್ಕಾರವನ್ನು ಕೇಳಿದೆ.

ನಾಳೆ ಪ್ರಕರಣದ ಕುರಿತ ವರದಿಯನ್ನು ತಿಳಿಸುವಂತೆ ಯುಪಿ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ. ನಾಳೆ ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ. ಈ ವಿಷಯಗಳನ್ನು ಸ್ಪಷ್ಟಪಡಿಸುವಂತೆ ಮತ್ತು ನಾಳೆ ವಿವರವಾದ ಉತ್ತರವನ್ನು ನೀಡುವಂತೆ ನ್ಯಾಯಪೀಠ ಯುಪಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

 “ತನಿಖೆ ಸರಿಯಾಗಿ ನಡೆದಿಲ್ಲ ಎಂದು ಮೃತರ  ಕುಟುಂಬಸ್ಥರಿಂದ ಆರೋಪ ಕೇಳಿ ಬಂದಿದೆ.ಅಪಘಾತದಲ್ಲಿ ಮೃತಪಟ್ಟ ರೈತನ ತಾಯಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದಿದೆ. ಅವರನ್ನು ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಎಲ್ಲಾ ವೈದ್ಯಕೀಯ ನೆರವು ನೀಡಬೇಕು ” – ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಸರ್ಕಾರಕ್ಕೆ ನಿರ್ದೇಶನ ನೀಡಿದರು. 

ಅಲಹಾಬಾದ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪ್ರದೀಪ್ ಶ್ರೀವಾಸ್ತವ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯುತ್ತಿದೆ ಮತ್ತು ಎರಡು ತಿಂಗಳಲ್ಲಿ ವರದಿ ಸಲ್ಲಿಸಲಾಗುವುದು ಎಂದು ಯುಪಿ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ ನ್ಯಾಯಾಲಯವು ಈ ವಿಷಯವನ್ನು ನಾಳೆ ಸ್ಪಷ್ಟಪಡಿಸುವಂತೆ ಮತ್ತು ವಿವರವಾದ ಉತ್ತರವನ್ನು ನೀಡುವಂತೆ ಸರ್ಕಾರಕ್ಕೆ ಆಜ್ಞಾಪಿಸಿದೆ.

ರೈತರ ಹತ್ಯೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟಿನ ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಉತ್ತರ ಪ್ರದೇಶದಲ್ಲಿ ಇಬ್ಬರು ವಕೀಲರು ಅರ್ಜಿ ಸಲ್ಲಿಸಿದ್ದರು. ಇದಲ್ಲದೇ, ಸುಪ್ರೀಂ ಕೋರ್ಟ್ ಸ್ವಯಂಪ್ರೇರಣೆಯಿಂದ ಪ್ರಕರಣ ದಾಖಲಿಸಿದೆ. ರೈತರ ಹತ್ಯೆಗೆ ದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಿದೆ.

ಕಳೆದ ಭಾನುವಾರ ಸಂಜೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಚಲಾಯಿಸಿದ ಪರಿಣಾಮ   ನಡುವೆ ವಾಹನ ಚಾಲನೆ ಮಾಡಿದರು. ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ. ವಾಹನದ ಚಾಲಕ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಎಂದು ರೈತರು ಆರೋಪಿಸಿದ್ದಾರೆ. ಆತನ ವಿರುದ್ಧ ಪ್ರಕರಣ ದಾಖಲಾಗಿದೆ ಆದರೆ ಪೊಲೀಸರು ಆತನನ್ನು ಬಂಧಿಸಿಲ್ಲ.error: Content is protected !! Not allowed copy content from janadhvani.com