ಬೆಂಗಳೂರು, ಅ.8: ಈದ್ ಮಿಲಾದ್ ಹಬ್ಬ ಮತ್ತು ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲು ಸೂಚಿಸಿರುವ ರಾಜ್ಯ ಸರ್ಕಾರ ಸಾಮೂಹಿಕ ಮೆರವಣಿಗೆ ನಡೆಸದಂತೆ ನಿಷೇಧಿಸಿದೆ.ರಾಜ್ಯದ ವಿವಿಧ ಕಡೆ ಅ.19, 20 ರಂದು ನಡೆಯುವ ಈದ್ ಮಿಲಾದ್ ಹಬ್ಬ ಮತ್ತು ಅ.20ರಂದು ನಡೆಯುವ ವಾಲ್ಮೀಕಿ ಜಯಂತಿ ಆಚರಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕಂದಾಯ ಇಲಾಖೆ ಹೊರಡಿಸಿದ್ದು, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿ, ಎಸ್ಪಿ, ಬಿಬಿಎಂಪಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.
ಹಬ್ಬದ ಅಂಗವಾಗಿ ನಡೆಯುವ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ನೂರು ಜನಕ್ಕಿಂತ ಹೆಚ್ಚು ಮಂದಿ ಒಟ್ಟಿಗೆ ಸೇರುವಂತಿಲ್ಲ. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು, ಮುಖಗವಸು ಧರಿಸಬೇಕು, ಧ್ವನಿವರ್ಧಕಗಳ ಬಳಕೆಯನ್ನು ನಿಷೇಸಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಹಬ್ಬ ಆಚರಿಸಬೇಕು.
ಸಾಮೂಹಿಕ ಪ್ರಾರ್ಥನೆ ವೇಳೆ ಹೆಚ್ಚು ಜನರು ಆಗಮಿಸುವಂತಿಲ್ಲ. ಸ್ಯಾನಿಟೈಜರ್ ಬಳಸಬೇಕು. ಮಸೀದಿಗಳಲ್ಲಿ ಕನಿಷ್ಟ ಆರು ಅಡಿ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಬೇಕು. ಹಬ್ಬದ ಸಂದರ್ಭದಲ್ಲಿ ಶಾಂತಿ-ಸೌಹಾರ್ದತೆಗೆ ಪೂರಕವಾಗಿ ಆಚರಣೆ ಮಾಡಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ಕಾಪಾಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಮಸೀದಿ ಹೊರತುಪಡಿಸಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಈದ್ ಮಿಲಾದ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ. ಪರಸ್ಪರ ಹಸ್ತ ಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ