ರಿಯಾದ್: ಸೌದಿ ಅರೇಬಿಯಾ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಪರಿಚಯಿಸಿದ್ದು, ಹಜ್ ಮತ್ತು ಉಮ್ರಾ ಯಾತ್ರಾರ್ಥಿಗಳು ಸ್ಮಾರ್ಟ್ ಫೋನ್ ಮೂಲಕ ವೀಸಾಗಳನ್ನು ಪಡೆಯಲು ಅವಕಾಶ. ಹೊಸ ವ್ಯವಸ್ಥೆಯು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿದೆ.
ಯಾತ್ರಿಕರು ನೀಡುವ ವೈಯಕ್ತಿಕ ಮಾಹಿತಿಯೊಂದಿಗೆ ವೀಸಾಗಳನ್ನು ಸ್ಮಾರ್ಟ್ಫೋನ್ನಲ್ಲಿ ಪಡೆಯಬಹುದು. ಈ ಹಿಂದೆ. ವಿದೇಶಿಯರು ಯಾವುದೇ ಏಜೆನ್ಸಿಗಳ ಮೂಲಕ ವೈಯಕ್ತಿಕ ಮಾಹಿತಿಯನ್ನು ಉಮ್ರಾ ಮತ್ತು ಹಜ್ಗಿಂತ ಮೊದಲು ಒದಗಿಸುತ್ತಿದ್ದರು. ಇನ್ಮುಂದೆ ಇದನ್ನು ನೇರವಾಗಿ ಪ್ರತಿಯೊಬ್ಬರಿಗೂ ನೀಡಬಹುದು. ಬೆರಳಚ್ಚುಗಳು ಸೇರಿದಂತೆ ಪ್ರಮುಖ ವೈಯಕ್ತಿಕ ವೈಶಿಷ್ಟ್ಯಗಳನ್ನು ರೆಕಾರ್ಡ್ ಮಾಡುವ ಬಯೋಮೆಟ್ರಿಕ್ ಆಪ್ ಅನ್ನು ಸೌದಿ ಅರೇಬಿಯಾ ಇದೀಗ ಬಿಡುಗಡೆ ಮಾಡಿದೆ.
ವಿದೇಶಾಂಗ ಸಚಿವ ಅಮೀರ್ ಫೈಸಲ್ ಬಿನ್ ಫರ್ಹಾನ್ ಯೋಜನೆಯನ್ನು ಉದ್ಘಾಟಿಸಿದರು. ಇದನ್ನು ವೀಸಾ ಮತ್ತು ಟ್ರಾವೆಲ್ ಸೊಲ್ಯೂಷನ್ ಕಂಪನಿ ಮೂಲಕ ಕಾರ್ಯಗತ ಗೊಳಿಸಲಾಗುತ್ತದೆ. ಯಾತ್ರಾರ್ಥಿಗಳಿಗೆ ಒದಗಿಸುವ ಸೇವೆಗಳನ್ನು ಸುಧಾರಿಸುವ ಮತ್ತು ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇಶವನ್ನು ಈ ಆಪ್ ಹೊಂದಿದೆ. ಹಜ್ ಮತ್ತು ಉಮ್ರಾ ವೀಸಾಗಳಿಗೆ ಅರ್ಜಿ ಸಲ್ಲಿಸುವವರು ತಮ್ಮ ವೈಯಕ್ತಿಕ ವೈಶಿಷ್ಟ್ಯಗಳನ್ನು ತಮ್ಮ ದೇಶಗಳಿಂದ ಸ್ಮಾರ್ಟ್ ಫೋನ್ ಮೂಲಕ ನೋಂದಾಯಿಸಿಕೊಳ್ಳಬಹುದು. ವೀಸಾ ನೀಡುವ ಕೇಂದ್ರಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ. ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ನೋಂದಣಿಗೆ ಅನುಗುಣವಾಗಿ ವೀಸಾಗಳನ್ನು ವಿದ್ಯುನ್ಮಾನವಾಗಿ ನೀಡಲಾಗುತ್ತದೆ. ಸ್ಮಾರ್ಟ್ಫೋನ್ಗಳ ಮೂಲಕ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಪರಿಚಯಿಸುವುದರೊಂದಿಗೆ, ಉಮ್ರಾ ಹಜ್ ವೀಸಾ ಪ್ರಕ್ರಿಯೆಯೂ ವೇಗಗೊಳ್ಳುತ್ತದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು