ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ನಾಯಕ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ನ ಸ್ಥಾಪಕಾಧ್ಯಕ್ಷ ಮೌಲಾನಾ ಉಸ್ಮಾನ್ ಬೇಗ್ ರಶಾದಿ(61)ಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಫಾರಂ ಫಾರ್ ಡಿಗ್ನಿಟಿ(KFD)ಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅವರು, ನಂತರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಲ್ಲಿ ಹಲವು ಅವಧಿಗಳಿಗೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ದೇಶದ ಉಲಮಾಗಳನ್ನು ಸಂಘಟಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಅವರು, ಧಾರ್ಮಿಕ ವಿದ್ವಾಂಸರ ರಾಷ್ಟ್ರ ಮಟ್ಟದ ಸಂಘಟನೆಯಾಗಿರುವ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC) ಸ್ಥಾಪನೆಗೂ ಅಹರ್ನಿಶಿ ಶ್ರಮ ವಹಿಸಿದ್ದರು. ಫ್ಯಾಶಿಸ್ಟ್ ಶಕ್ತಿಗಳ ವಿರುದ್ಧ ನಿರಂತರ ಧ್ವನಿ ಎತ್ತುತ್ತಿದ್ದ ಮೌಲಾನಾ, ಮುಸ್ಲಿಮ್ ಸಮುದಾಯದಲ್ಲಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಪ್ರಮುಖ ಧಾರ್ಮಿಕ ವಿದ್ವಾಂಸರಾಗಿದ್ದ ಅವರು ಶಿವಾಜಿನಗರದ ಹರಿ ಮಸ್ಜಿದ್ ನಲ್ಲಿ ದೀರ್ಘಕಾಲ ಸಹಿತ ಬೆಂಗಳೂರಿನ ಇತರ ಮಸೀದಿಗಳಲ್ಲೂ ಹಲವಾರು ವರುಷಗಳ ಕಾಲ ಇಮಾಮ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಮೌಲಾನಾ ಉಸ್ಮಾನ್ ಬೇಗ್ ರಶಾದಿ ಅವರ ನಿಧನ ಭಾರತೀಯ ಮುಸ್ಲಿಮರಿಗೆ ತುಂಬಲಾರದ ನಷ್ಟವಾಗಿದೆ. ಪ್ರಖಂಡ ವಿದ್ವಾಂಸರೂ, ಸಾಮಾಜಿಕ ಹೋರಾಟಗಾರರೂ, ಸಂಘಟಕರೂ ಆಗಿದ್ದ ಮೌಲಾನ ತಮ್ಮ ಜೀವನದ ಕೊನೆಯವರೆಗೂ ಫ್ಯಾಶಿಸ್ಟ್ ಶಕ್ತಿಗಳ ವಿರುದ್ಧ ಧ್ವನಿ ಎತ್ತಿ ಪಾಪ್ಯುಲರ್ ಫ್ರಂಟ್ ಸಂಘಟನೆಯನ್ನು ದೇಶಾದ್ಯಂತ ವಿಸ್ತರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅವರ ನಿಧನದಿಂದ ದೇಶ, ಅತ್ಯುತ್ತಮ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಸೃಷ್ಟಿಕರ್ತನು ಅವರ ಕುಟುಂಬಸ್ಥರಿಗೆ, ಅಭಿಮಾನಿ ವರ್ಗಕ್ಕೆ ಕರುಣಿಸಲಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ
ಪರೀಕ್ಷೆಗೂ ಹಿಜಾಬ್ ಗೂ ಸಂಬಂಧವಿಲ್ಲ- ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಜನಾದೇಶವಿಲ್ಲದೆ ಬಿಜೆಪಿಗೆ ಗೆಲುವು: ಇದು ಇವಿಎಂ ದುರ್ಬಳಕೆ- ಸಂಘಟಿತ ಹೋರಾಟಕ್ಕೆ ಕಾಂಗ್ರೆಸ್ಗೆ ದೀದಿ ಆಹ್ವಾನ