ತಿರುವನಂತಪುರ: ಕೇರಳದ ದಕ್ಷಿಣ ಜಿಲ್ಲೆಗಳಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಇತರ ಹಾನಿಯಲ್ಲಿ ಆರು ಜನರು ಮೃತಪಟ್ಟಿದ್ದಾರೆ. 15 ಮಂದಿ ಕಾಣೆಯಾಗಿದ್ದಾರೆ.
ಕೇರಳದಲ್ಲಿ ಐದಾರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅರ್ಧ ರಾಜ್ಯವೇ ನೀರಿನಿಂದ ಆವರಿಸಿಕೊಂಡಿದೆ. 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದ ರಸ್ತೆಗಳು ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಹಲವು ಡ್ಯಾಂಗಳ ಗೇಟುಗಳನ್ನು ತೆರೆಯಲಾಗಿದೆ.
ರಾಜ್ಯದ ಕೊಟ್ಟಾಯಂನ ಚೋಳತಡಂ ಕೂಟಿಕಲ್ ಗ್ರಾಮದ ಪ್ಲಾಪಲ್ಲಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಮೂರು ಮನೆಗಳು ಕೊಚ್ಚಿ ಹೋಗಿವೆ. ಕಾಣೆಯಾದ ಹತ್ತು ಜನರ ಪೈಕಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಇಡುಕ್ಕಿ ಕಂಜಾರ್ ನಲ್ಲಿ ಭಾರೀ ಮಳೆಗೆ ಕಾರು ಕೊಚ್ಚಿಹೋಗಿದೆ. ಕಾರಿನಲ್ಲಿದ್ದ ಇಬ್ಬರ ಮೃತದೇಹ ಪತ್ತೆಯಾಗಿದೆ.
ಪೂಂಜಾರ್ ನಲ್ಲಿ ಕೇರಳ ಸರ್ಕಾರಿ ನಿಗಮದ ಬಸ್ ಮುಳುಗಡೆ ಆಗಿದೆ.ಜನಜೀವನ ಅಸ್ತವ್ಯಸ್ತಗೊಂಡಿದೆ.ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಇನ್ನಷ್ಟು ಧಾರಾಕಾರ ಮಳೆ ಆಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಪಥನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತಿರುವನಂತಪುರಂ, ಕೊಲ್ಲಂನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕೇರಳ ರಾಜ್ಯದ ಬಹುತೇಕ ಎಲ್ಲ ಡ್ಯಾಂಗಳ ಎಲ್ಲ ಗೇಟ್ಗಳನ್ನೂ ತೆರೆಯಲಾಗುತ್ತಿದ್ದು, ಪಂಪಾ ನದಿಗೆ ಇಳಿಯದಂತೆ ಶಬರಿಮಲೆಗೆ ಭಕ್ತರಿಗೆ ಸೂಚಿಸಲಾಗಿದೆ.ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ, ಮುಂದಿನ 24 ಗಂಟೆ ರಾಜ್ಯದ ವಿವಿಧೆಡೆ ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್