ಮಂಗಳೂರು: ಬದ್ರಿಯಾ ಜುಮಾ ಮಸ್ಜಿದ್ & ಮದೀನತುಲ್ ಉಲೂಮ್ ಹೈಯರ್ ಸೆಕೆಂಡರಿ ಮದರಸ ಕುಪ್ಪೆಪದವು ಇದರ ಆಶ್ರಯದಲ್ಲಿ ಪುಣ್ಯ ರಬೀಹ್ ಪ್ರಯುಕ್ತ ಬೃಹತ್ ಹುಬ್ಬುರ್ರಸೂಲ್ ಕಾನ್ಫರೆನ್ಸ್ ಕಾರ್ಯಕ್ರಮವು ಅಕ್ಟೋಬರ್ 19 ಮಂಗಳವಾರದಂದು ಸ್ಥಳೀಯ ಖತೀಬರಾದ ಅಬೂ ಝೈದ್ ಶಾಫಿ ಮದನಿ ಕರಾಯ ರವರ ನೇತೃತ್ವದಲ್ಲಿ ನಡೆಯಲಿದೆ.

ಪ್ರಸ್ತುತ ಕಾರ್ಯಕ್ರಮದ ಅಂಗವಾಗಿ ಮುಂಜಾನೆ 4:00 ಗಂಟೆಗೆ ಸರಿಯಾಗಿ ಜಶ್ನೇ ಮಿಲಾದ್ ಕಾರ್ಯಕ್ರಮ, 8:30 ಕ್ಕೆ ಸರಿಯಾಗಿ ಧ್ವಜಾರೋಹಣ ಕಾರ್ಯಕ್ರಮ, ಮದ್ಹ್ ರಸೂಲ್ ಪ್ರಭಾಷಣ, ಮೌಲಿದ್ ಮಜ್ಲಿಸ್, ಕೂಟು ಝಿಯಾರತ್ ಹಾಗೂ ಸ್ಟೂಡೆಂಟ್ಸ್ ಫೆಸ್ಟ್ 2021 ಇದರ ಸಮಾರೋಪ ಸಮಾರಂಭ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಲಿದೆ , ಹಾಗು ಕಾರ್ಯಕ್ರಮದ ಕೊನೆಯಲ್ಲಿ ಅನ್ನದಾನ ಕಾರ್ಯಕ್ರಮವು ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬದ್ರಿಯಾ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿಯ ಅಧ್ಯಕ್ಷರಾದ ಕೆ. ಉಮರಬ್ಬ ಹಾಗೂ ಪ್ರಧಾನ ಕಾರ್ಯದರ್ಶಿ ರಫೀಕ್ ಆಚಾರಿಜೋರ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್