janadhvani

Kannada Online News Paper

ಈದ್ ಮಿಲಾದ್ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಕೋವಿಡ್ ನಿಯಾಮಾವಳಿಗಳನ್ನು ಪಾಲಿಸಿಕೊಂಡು ಮಸೀದಿ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಬಹುದು.

ಮಂಗಳೂರು,ಅ.18: ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಈದ್ ಮಿಲಾದ್ ಅನ್ನು ಸರಳವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.

ಜಿಲ್ಲೆಯಾದ್ಯಂತ ಆಚರಿಸಲಿರುವ ಈದ್ ಮಿಲಾದ್ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಲಾಗಿದೆ.

  • ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಪ್ರವಚನ ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ ಸಾಂಸ್ಕೃತಿಕ ಕಾರ್ಯಕ್ರಮ/ ಸಭೆ/ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ.
  • ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಪಾಲಿಸಲು ಸುರಕ್ಷಿತ ಅಂತರ ಹಾಗೂ ಕೋವಿಡ್ ನಿಯಾಮಾವಳಿಗಳನ್ನು ಪಾಲಿಸಿಕೊಂಡು ಮಸೀದಿ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಬಹುದು.
  • ಒಂದು ವೇಳೆ ಹೆಚ್ಚು ಜನ ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಬಹುದು .
  • ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ.
  • ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು.
  • 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಿಕೊಂಡು ಆಚರಿಸಬಹುದಾಗಿದೆ.
  • ಮಸೀದಿಗಳಲ್ಲಿ ನಮಾಝ್ ನಿರ್ವಹಿಸುವವರ ಮಧ್ಯ ಕನಿಷ್ಠ ಆರು ಅಡಿ ಅಂತರ ಇರಬೇಕು.
  • ಮಸೀದಿ ಪ್ರವೇಶಿಸುವ ಮೊದಲು ದೇಹದ ತಾಪಮಾನ ತಪಾಸಣೆ ಮಾಡಬೇಕು.
  • ಮಸೀದಿಯಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ಮನೆಗಳಿಂದ ಮುಸಲ್ಲಾವನ್ನು ಕಡ್ಡಾಯವಾಗಿ ತರಬೇಕು.
  • ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ.

ಮಸೀದಿಗಳನ್ನು ಹೊರತುಪಡಿಸಿ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ (ಸಭಾಂಗಣ, ಸಮುದಾಯ ಭವನ, ಶಾದಿಮಹಲ್ ನಲ್ಲಿ ಈದ್ ಮಿಲಾದ್ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ/ ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಮತ್ತು ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

error: Content is protected !! Not allowed copy content from janadhvani.com