ಪುತ್ತೂರು: ತಾಲೂಕಿನ ಸುಳ್ಯಪದವು ಎಂಬಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಬಿಜೆಪಿ ಮತ್ತು ಆರೆಸ್ಸೆಸ್ ಹಿರಿಯ ಮುಖಂಡ ನಾರಾಯಣ ರೈ ಅತ್ಯಾಚಾರ ಮಾಡಿ ಗರ್ಭದಾನ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಬೇಕಾದ ಪೊಲೀಸರು ಆರೋಪಿಯನ್ನು ರಕ್ಷಿಸಲು ಹೊರಟಿರುವ ನಡೆ ಖಂಡನೀಯ. ಅದೇ ರೀತಿ ಆರೋಪಿಯನ್ನು ಶೀಘ್ರ ಬಂಧಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿಯು ಆಗ್ರಹಿಸಿದೆ.
ಆರೋಪಿ ಬಿಜೆಪಿ ಮುಖಂಡ ತನ್ನ ಪ್ರಭಾವ ಬಳಸಿಕೊಂಡು ಸಂಪೂರ್ಣ ಪ್ರಕರಣವನ್ನು ಬಾಲಕಿಯ ಸಹೋದರನ ಮೇಲೆ ಹೊರಿಸಿ ಘಟನೆಯ ಸತ್ಯಾಸತ್ಯತೆ ಮುಚ್ಚಿಹಾಕಿದ್ದಾರೆ. ಪ್ರಕರಣ ಮುಚ್ಚಿ ಹಾಕಲು ಸ್ಥಳೀಯ ಪೋಲಿಸ್ ಅಧಿಕಾರಿಗಳು ಬಾಲಕಿಯ ಕುಟುಂಬಕ್ಕೆ ಬೆದರಿಕೆ ಹಾಕಿರುವುದು ಮತ್ತು ಡಿಎನ್ಎ ಪರೀಕ್ಷೆ ನಡೆಸದೆ ಪ್ರಕರಣವನ್ನು ಬಾಲಕಿಯ ಅಣ್ಣನ ತಲೆಗೆ ಕಟ್ಟಿ ಇಲ್ಲಿನ ಆಡಳಿತ ವ್ಯವಸ್ಥೆ ಕೈಜೋಡಿಸಿರುವುದು ಆರೋಪಿಯೊಂದಿಗೆ ವಿಪರ್ಯಾಸ.
ಇಷ್ಟೆಲ್ಲಾ ನಡೆದು ಒಂದು ತಿಂಗಳು ಕಳೆದರೂ ಮಾಧ್ಯಮವಾಗಲಿ, ಆಡಳಿತ ವ್ಯವಸ್ಥೆಯಾಗಲಿ ಮಾತೆತ್ತಿಲ್ಲ. ಒಟ್ಟಿನಲ್ಲಿ ಬಾಲಕಿಯ ಕುಟುಂಬದ ಅಸಹಾಯಕತೆಯನ್ನು ಉಪಯೋಗಿಸಿಕೊಂಡು ಆರೋಪಿ ಬಿಜೆಪಿ ಮುಖಂಡನ ಪ್ರಕರಣವನ್ನು ಮುಚ್ಚಿಹಾಕಲು ವ್ಯವಸ್ಥಿತ ಯೋಜನೆ ರೂಪಿಸಲಾಗಿದೆ. ಈ ಘಟನೆಯ ಕುರಿತು ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆಯಾಗಬೇಕು. ಪ್ರಕರಣ ಮುಚ್ಚಿ ಹಾಕಲು ಕೈಜೋಡಿಸಿದ ಎಲ್ಲಾ ಅಧಿಕಾರಿಗಳನ್ನು ತನಿಖೆ ನಡೆಸಿ ಶಿಕ್ಷೆಗೊಳಪಡಿಸಬೇಕು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾಧ್ಯಕ್ಷರಾದ ಅನ್ಸಾರ್ ಬೆಳ್ಳಾರೆ ರವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್