ನವದೆಹಲಿ,ಅ.19: ಪ್ರವಾದಿ ಮುಹಮ್ಮದ್ ಪೈಗಂಬರ್ ಸ್ವಲ್ಲಲ್ಲಾಹು ಅಲೈಹಿ ವ ಸಲ್ಲಮ್ ಅವರ ಜನ್ಮದಿನವಾದ ಈದ್ -ಮಿಲಾದ್‌ನ್ನು ದೇಶಾದ್ಯಂತ ಮುಸ್ಲಿಮರು ಸಂಭ್ರಮದಿಂದ ಮಂಗಳವಾರ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು. ಪ್ರಮುಖವಾಗಿ ಮುಸ್ಲಿಂ ಸಹೋದರ ಹಾಗೂ ಸಹೋದರಿಯರಿಗೆ ಈಗ್ ಮಿಲಾದ್ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಈದ್-ಇ-ಮಿಲಾದ್ ಎಂದು ಆಚರಿಸಲಾಗುತ್ತದೆ. ನಾವು ಪ್ರವಾದಿಯ ಜೀವನ ಮತ್ತು ಆದರ್ಶಗಳಿಂದ ಸ್ಫೂರ್ತಿ ಪಡೆಯೋಣ ಮತ್ತು ಸಮಾಜದ ಏಳಿಗೆ ಮತ್ತು ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ದುಡಿಯೋಣ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ, ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು, ಈ ಹಬ್ಬ ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿ ತರಲಿ. ದಯೆ ಮತ್ತು ಸಹೋದರತ್ವದ ಗುಣಗಳು ಯಾವಾಗಲೂ ಮೇಲುಗೈ ಸಾಧಿಸಲಿ. ಈದ್ ಮುಬಾರಕ್! ಎಂದು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ