ವಿಜಯಪುರ:ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ.
ಆ ರೀತಿ ಅಗೌರವದಿಂದ ಮಾತನಾಡಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಸಿಂದಗಿ ತಾಲ್ಲೂಕಿನ ಮೊರಟಗಿ ಯಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನಿಗೆ ಉತ್ತರಿಸಿದ ಅವರು,ಯಾರೂ
ಯಾರ ಬಗ್ಗೆಯೂ ಈ ರೀತಿ ಅಗೌರವದಿಂದ ಮಾತನಾಡಬಾರದು ಎಂದರು. ರಾಹುಲ್ ಗಾಂಧಿ ಬಗ್ಗೆ ಗೌರವ ಇದೆ ಎಂದು ಹೇಳಿದರು.







