ದೆಹಲಿಯ ಗುರುಗ್ರಾಮದಲ್ಲಿ ಮುಸ್ಲಿಮರ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್, “ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!” ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿಯ ಗುರುಗ್ರಾಮದ ಸೆಕ್ಟರ್ 12 ಮತ್ತು ಸೆಕ್ಟರ್ 47 ರಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಮಾಡುತ್ತಿದ್ದ ಮುಸ್ಲಿಮರ ಮೇಲೆ ಕೆಲವು ಹಿಂದೂ ಸಂಘಟನೆಗಳು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
ಪ್ರಾರ್ಥನೆ ಸಲ್ಲಿಸುತ್ತಿರುವ ಜನರ ಮುಂದೆ ಬಜರಂಗದಳದ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊ ಕ್ಲಿಪ್ ಹಂಚಿಕೊಂಡಿದ್ದಾರೆ.
As a Hindu I’m ashamed! https://t.co/26OfIqTeHO
— Swara Bhasker (@ReallySwara) October 22, 2021
ಸ್ವರಾ ಭಾಸ್ಕರ್ ತಮ್ಮ ಟ್ವಿಟರ್ ಖಾತೆಯಲ್ಲಿ, “ಅನ್ಯ ಧರ್ಮದ ಜನರಿಗೆ ಕಿರುಕುಳ ನೀಡುತ್ತಿರುವ ಕೆಲವು ಪುಂಡ ಪೋಕರಿಗಳು ನನ್ನ ದೇವರ ಹೆಸರನ್ನು ಬಳಸುತ್ತಿದ್ದಾರೆ. ಇದು ನನ್ನ ಹಿಂದೂ ಧರ್ಮಕ್ಕೆ ಮಾಡಿದ ಅವಮಾನವಾಗಿದೆ. ಅಂತಹ ಜನರ ಬಗ್ಗೆ ನನಗೆ ನಾಚಿಕೆಯಾಗುತ್ತದೆ. ನಾನು ಹಿಂದೂವಾಗಿ ನಾಚಿಕೆಪಡುತ್ತೇನೆ. ಹಿಂದೂ ಧರ್ಮವು ಇತರ ಧರ್ಮದ ಜನರಿಗೆ ಕಿರುಕುಳ ನೀಡುವುದನ್ನು ಕಲಿಸುವುದಿಲ್ಲ” ಎಂದಿದ್ದಾರೆ.
ಇದೇ ಘಟನೆಯನ್ನು ಖಂಡಿಸಿರುವ ಮತ್ತೊಬ್ಬ ಟ್ವಿಟರ್ ಬಳಕೆದಾರರು “ಧಾರ್ಮಿಕ ಅಸಹಿಷ್ಣುತೆ ಎಲ್ಲಾ ಸಮಯಕ್ಕಿಂತ ಈಗ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಇತರ ಧರ್ಮಗಳನ್ನು ಅರ್ಥಮಾಡಿಕೊಳ್ಳಲು ಮತ್ತು ನಾವು ಜಾತ್ಯತೀತರು ಎಂದು ಸಾಬೀತುಪಡಿಸುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.
ನಗರದ ಸೆಕ್ಟರ್ 47ರಲ್ಲಿ ಸರ್ಕಾರಿ ಭೂಮಿಯಲ್ಲಿ ಬಹಿರಂಗ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಬೇಕು ಎಂಬ ಆಗ್ರಹ ಕೇಳಿ ಬಂದಿರುವಾಗಲೇ ಈ ಘಟನೆ ಮುನ್ನೆಲೆಗೆ ಬಂದಿದೆ. ಮುಸ್ಲಿಂ ಸಮುದಾಯದ ಜನರು ಪ್ರಾರ್ಥನೆಗಾಗಿ ಸೇರುತ್ತಿದ್ದರು. ಈ ವೇಳೆ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ದಾಳಿ ನಡೆಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ