ಪುರುಷ ರಕ್ಷಕರಿಲ್ಲದೆ ಮಹಿಳೆಯರು ಹಜ್ ಯಾತ್ರೆ ಕೈಗೊಳ್ಳಲು ಅವಕಾಶ -ಪ್ರಧಾನಿ ಮೋದಿ

ನವದೆಹಲಿ, ಡಿ.31:-ಮಹಿಳೆಯರು ಪುರುಷ ರಕ್ಷಕರಿಲ್ಲದೆ ಹಜ್ ಯಾತ್ರೆ ಕೈಗೊಳ್ಳಲು ತಮ್ಮ ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಸಂಬಂಧ ಇದ್ದ ನಿಬ್ಬಂದನೆಗಳನ್ನು ಕೇಂದ್ರ ಸರ್ಕಾರ ತೆಗೆದು ಹಾಕಿರುವುದರಿಂದ ನೂರಾರು ಮಹಿಳೆಯರು ನಿರ್ಭಯವಾಗಿ ಹಜ್ ಯಾತ್ರೆ ಕೈಗೊಳ್ಳಲು ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.

ಈ ವರ್ಷದ ಕೊನೆಯ ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮದಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ವರಿಗೂ ಹೊಸ ವರ್ಷದ ಶುಭಾಶಯ ಕೋರಿದರು. ತಮ್ಮ ಸರ್ಕಾರವು ಮುಸ್ಲಿಂ ಮಹಿಳೆಯರ ಸಬಲೀಕರಣಕ್ಕೆ ಬದ್ಧವಾಗಿದೆ. ಆ ಜನಾಂಗದಲ್ಲಿರುವ ತಾರತಮ್ಯವನ್ನು ಹೋಗಲಾಡಿಸಲು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಹಿಂದೆ ಪುರುಷ ಪೋಷಕರೊಂದಿಗೆ ಮಹಿಳೆಯರು ಹಜ್ ಯಾತ್ರೆಗೆ ತೆರಳಬೇಕಾಗಿತ್ತು. ಈಗ ಅದಕ್ಕೆ ಸಂಬಂಧಿಸಿದ ಕೆಲವು ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ. ಹೀಗಾಗಿ 45 ವರ್ಷ ಮೇಲ್ಪಟ್ಟ ಕನಿಷ್ಠ ನಾಲ್ವರು ಮಹಿಳೆಯರ ಗುಂಪು ಹಜ್ ಯಾತ್ರೆ ಕೈಗೊಳ್ಳಲು ಅವಕಾಶವಿದೆ ಎಂದು ಹೇಳಿದರು.

ಇವುಗಳನ್ನೂ ಓದಿ

Leave a Reply

Your email address will not be published. Required fields are marked *

error: Content is protected !!