janadhvani

Kannada Online News Paper

ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಹೀನಾಯ ಸೋಲು- ಕಾಂಗ್ರೆಸ್ ಗೆ ಗೆಲುವು

ಹಾನಗಲ್: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು 7598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

‘ಸಿಎಂ ತವರು ಜಿಲ್ಲೆ’ ಹಾನಗಲ್ ಕ್ಷೇತ್ರದಲ್ಲಿ ಗೆದ್ದೇ ತೀರುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

‘ಆಪತ್ಬಾಂಧವ’ ಎಂಬ ಬಿರುದಿಗೆ ಪಾತ್ರರಾಗಿದ್ದ ಶ್ರೀನಿವಾಸ ಮಾನೆ ಅವರ ಗೆಲುವಿಗೆ ಕೋವಿಡ್ ಕಾಲದಲ್ಲಿ ಜನರಿಗೆ ಸ್ಪಂದನೆ ಹಾಗೂ ಕಾಂಗ್ರೆಸ್ ಸರ್ಕಾರದ ಭಾಗ್ಯಗಳ ಯೋಜನೆ ಸಹಕಾರಿಯಾಗಿವೆ ಎನ್ನಲಾಗುತ್ತಿದೆ.

ಸಿಎಂ ಉದಾಸಿ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಅವರ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ್ ಸಜ್ಜನರ್ ಅವರನ್ನ ಕಣಕ್ಕೆ ಇಳಿಸಲಾಗಿತ್ತು. ಜೆಡಿಎಸ್​ ನಿಯಾಜ್ ಶೇಕ್​ ಅವರನ್ನ ಕಣಕ್ಕೆ ಇಳಿಸಿತ್ತು.

ಒಟ್ಟು 19 ಸುತ್ತಿನ ಮತ ಏಣಿಕೆ ಕಾರ್ಯ ನಡೆದಿದ್ದು, ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್​ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವನ್ನ ತಮ್ಮದಾಗಿಸಿಕೊಂಡಿದ್ದಾರೆ.