ಹಾನಗಲ್: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು 7598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
‘ಸಿಎಂ ತವರು ಜಿಲ್ಲೆ’ ಹಾನಗಲ್ ಕ್ಷೇತ್ರದಲ್ಲಿ ಗೆದ್ದೇ ತೀರುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.
‘ಆಪತ್ಬಾಂಧವ’ ಎಂಬ ಬಿರುದಿಗೆ ಪಾತ್ರರಾಗಿದ್ದ ಶ್ರೀನಿವಾಸ ಮಾನೆ ಅವರ ಗೆಲುವಿಗೆ ಕೋವಿಡ್ ಕಾಲದಲ್ಲಿ ಜನರಿಗೆ ಸ್ಪಂದನೆ ಹಾಗೂ ಕಾಂಗ್ರೆಸ್ ಸರ್ಕಾರದ ಭಾಗ್ಯಗಳ ಯೋಜನೆ ಸಹಕಾರಿಯಾಗಿವೆ ಎನ್ನಲಾಗುತ್ತಿದೆ.
ಸಿಎಂ ಉದಾಸಿ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಅವರ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ್ ಸಜ್ಜನರ್ ಅವರನ್ನ ಕಣಕ್ಕೆ ಇಳಿಸಲಾಗಿತ್ತು. ಜೆಡಿಎಸ್ ನಿಯಾಜ್ ಶೇಕ್ ಅವರನ್ನ ಕಣಕ್ಕೆ ಇಳಿಸಿತ್ತು.
ಒಟ್ಟು 19 ಸುತ್ತಿನ ಮತ ಏಣಿಕೆ ಕಾರ್ಯ ನಡೆದಿದ್ದು, ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವನ್ನ ತಮ್ಮದಾಗಿಸಿಕೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು