ಕೊಚ್ಚಿ : ತನ್ನ ರೆಸ್ಟೋರೆಂಟ್ ಮುಂದೆ ‘ಹಲಾಲ್ ನಿಷಿದ್ಧ’ ಎಂಬ ಬೋರ್ಡ್ ಹಾಕಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ತುಷಾರ ಮತ್ತು ಅವರ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ನ. 2 ರಂದು ಇಬ್ಬರನ್ನು ಬಂಧಿಸಲಾಗಿದೆ ಎಂದು ಎರ್ನಾಕುಲಂ ನಗರ ಪೊಲೀಸ್ ಆಯುಕ್ತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ರೆಸ್ಟೋರೆಂಟ್ ಮಾಲಿಕತ್ವದ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ತುಷಾರ ಹಾಗೂ ಸಹಚರರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಪರಾರಿಯಾಗಿದ್ದ ತುಷಾರ, ಆಕೆಯ ಪತಿ ಅಜಿತ್ ಮತ್ತು ಆಕೆಯ ಸಹೋದ್ಯೋಗಿ ಅಪ್ಪು ಎಂಬುವವರನ್ನು ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ ಎಚ್ ನಾಗರಾಜು ಮಂಗಳವಾರ ಖಚಿತಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಆಕೆಯ ಇಬ್ಬರು ಸಹಚರರಾದ ಅಬಿನ್ ಬೆನ್ಸಸ್ ಆಂಟೋನಿ (22) ಮತ್ತು ವಿಷ್ಣು ಶಿವದಾಸ್ (26) ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದರು.
ತುಷಾರ ತನ್ನ ಎಫ್‌ಬಿ ಪೋಸ್ಟ್‌ನಲ್ಲಿ ಹಲಾಲ್ ಅಲ್ಲದ ಆಹಾರವನ್ನು ನೀಡಿದ್ದಕ್ಕಾಗಿ ಜಿಹಾದಿಗಳು ತನ್ನ ಮೇಲೆ ದಾಳಿ ಮಾಡಿದ್ದಾರೆ ಎಂದು ಸುಳ್ಳು ಆರೋಪವನ್ನು ಪ್ರಚಾರ ಪಡಿಸಿ ಕೋಮುದ್ವೇಷ ಹರಡಲು ಯತ್ನಿಸಿದ್ದರು. ಇದನ್ನು ಕೆಲವು ಸಂಘ ಪರಿವಾರದ ಗುಂಪುಗಳು ಕೈಗೆತ್ತಿಕೊಂಡು ಪ್ರಚಾರ ಪಡಿಸಿದ್ದರು.ಕೇರಳದ ಕೊಚ್ಚಿಯಲ್ಲಿ ಹಲಾಲ್ ಮಾಡದ ಆಹಾರ ಪೂರೈಸುವ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಲು ಪ್ರಯತ್ನಿಸಿದ ತುಷರಾ ಅಜಿತ್ ಅವರ ಮೇಲೆ ಮುಸ್ಲಿಂ ಸಮುದಾಯದವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕೆಲವು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.
ವರದಿಗಳ ಪ್ರಕಾರ ಧಾರ್ಮಿಕ ಕಾರಣಗಳಿಂದ ಯಾವುದೇ ಘರ್ಷಣೆ ನಡೆದಿಲ್ಲ. ಯಾವುದೋ ವಿಷಯವಾಗಿ ವಾದ ವಿವಾದಗಳು ನಡೆದಿದ್ದು ಹೋರಾಟ ಭುಗಿಲೆದ್ದಿದೆ. ಈ ಜಗಳದಲ್ಲಿ ಭಾಗಿಯಾದವರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಯಾರು ಇಲ್ಲ ಎನ್ನಲಾಗಿದೆ.
ಅಲ್ಲದೇ, ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಕೋಮುದ್ವೇಷ ಹರಡಿದ ಆರೋದಪ ಮೇಲೆ ತುಷಾರ ವಿರುದ್ಧ ಇನ್ಫೋಪಾರ್ಕ್ ಪೊಲೀಸರು ಭಾನುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತುಷಾರ ಅಜಿತ್ ಕಲ್ಲಾಯಿಲ್ ಎಂಬುವವರ ಫೇಸ್‌ಬುಕ್ ಖಾತೆಯಲ್ಲಿ ‘ಕೋಮು ದ್ವೇಷವನ್ನು ಕೆರಳಿಸುವ ಉದ್ದೇಶದಿಂದ ವೀಡಿಯೋ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಪರ್ಯಾಸವೆಂದರೆ, ಈಗಲೂ ಕೆಲವೊಂದು ಸಂಘಪರಿವಾರ ಸಂಘಟನೆಯ ನಾಯಕರು ಈ ನಕಲಿ ವಾರ್ತೆಯನ್ನು ಹಂಚಿ ತಮ್ಮ ವಿಕೃತಿ ಮೆರೆಯುತ್ತಿದ್ದಾರೆ ಎಂಬುದಕ್ಕೆ ಈ ಕೆಳಗಿನ ಟ್ವಿಟರ್ ಪೋಸ್ಟ್ ಸಾಕ್ಷಿ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ