janadhvani

Kannada Online News Paper

ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ- ಸಿದ್ದರಾಮಯ್ಯ

ಬೆಂಗಳೂರು: ಅಪ್ರತಿಮ ಸ್ವಾತಂತ್ರ್ಯ ಸೇನಾನಿ, ದಕ್ಷ ಆಡಳಿತಗಾರ ಮತ್ತು ಜಾತ್ಯತೀತನಾಗಿ ಸರ್ವರನ್ನೂ ಪೊರೆದ ಟಿಪ್ಪು ಸುಲ್ತಾನ್ ನಾಡಿನ ಹೆಮ್ಮೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಅವರು ಈ ಶುಭಾಶಯ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ‘ರಾಜಕೀಯ ಪ್ರೇರಿತ ಅಪಪ್ರಚಾರಕ್ಕೆ ಕಿವಿಗೊಡದೆ ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ. ನಾಡ ಬಂಧುಗಳಿಗೆ ಟಿಪ್ಪು ಜಯಂತಿಯ ಶುಭಾಶಯಗಳು’ ಎಂದಿದ್ದಾರೆ.