ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಮೇ 3ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು.
ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು ‘ಇಂದು (ಶುಕ್ರವಾರ) ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದಿದ್ದು, ಪರೀಕ್ಷಾ ಸುಧಾರಣಾ ಕ್ರಮ ತೃಪ್ತಿ ತಂದಿದೆ’ ಎಂದರು.
‘ಈ ಬಾರಿ ಒಟ್ಟು 33 ವಿಷಯಗಳಲ್ಲಿ ಪರೀಕ್ಷೆ ನಡೆದಿದೆ. 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ. 2.73 ರಷ್ಟು ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. 2817 ಪರೀಕ್ಷಾ ಕೇಂದ್ರಗಳಲ್ಲಿ 51 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ. ಇದೇ 16ರಿಂದ 25ರ ವರೆಗೆ ಮೌಲ್ಯಮಾಪನ ನಡೆಯಲಿದೆ’ಎಂದು ಮಾಹಿತಿ ನೀಡಿದರು.
ಪರೀಕ್ಷೆಯ ಉತ್ತರಗಳನ್ನು ಮೇ.8 ರಂದು ಅಂತರ್ಜಾಲದಲ್ಲಿ ಪ್ರಕಟಿಸಲಾಗುತ್ತದೆ. ಫಲಿತಾಂಶದ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮೇ 8ರಿಂದ 10ರವರೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.
ಕಳೆದ ವರ್ಷ ಗಣಿತ ವಿಷಯದಲ್ಲಿ 16 ವಿದ್ಯಾರ್ಥಿಗಳು ಡಿಬಾರ್ ಆಗಿದ್ದರೆ, ಈ ಬಾರಿ 21 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ. ಕಳೆದ ಬಾರಿ ಶೇ. 73.47 ರಷ್ಟು ಫಲಿತಾಂಶ ಬಂದಿದ್ದು, ಈ ಬಾರಿ ಇನ್ನೂ ಉತ್ತಮ ಫಲಿತಾಂಶ ಬರುವ ವಿಶ್ವಾಸವಿದೆ ಎಂದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ