ಮನಾಮ: ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ, ಮುಸ್ಲಿಮರ ವಿರುದ್ಧ ಸಂಘಪರಿವಾರ ನಡೆಸುತ್ತಿರುವ ವ್ಯವಸ್ಥಿತ ಹಿಂಸಾಚಾರ ಮತ್ತು ಹತ್ಯೆಯನ್ನು ಬಹ್ರೇನ್ ತೀವ್ರವಾಗಿ ಖಂಡಿಸಿದೆ.
ಭಾರತವು, ಹಿಂಸಾಚಾರಗಳಿಗೆ ಕಡಿವಾಣ ಹಾಕದಿದ್ದರೆ ಭಾರತದೊಂದಿಗಿನ ವ್ಯಾಪಾರ ವಹಿವಾಟುಗಳನ್ನು ಬಹಿಷ್ಕರಿಸುವುದರೊಂದಿಗೆ ಭಾರತದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಹ್ರೈನ್ ಮಂತ್ರಿಮಂಡಲದ ಶಾಸಕ ಅಬ್ದುಲ್ ರಝಾಕ್ ಹತ್ತಾಬ್ ಅವರು ಎಚ್ಚರಿಸಿದ್ದಾರೆ.
ಅವರು ಇತ್ತೀಚೆಗೆ ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ, ಅಸ್ಸಾಂ ಮತ್ತು ಕಾಶ್ಮೀರದಲ್ಲಿ ಮುಸ್ಲಿಮರು ವ್ಯಾಪಕ ಹಿಂಸಾಚಾರ, ನಿಂದನೆ ಮತ್ತು ವ್ಯವಸ್ಥಿತ ಹತ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಉಲ್ಲೇಖಿಸಿದರು. ಮುಸ್ಲಿಮರ ಸ್ವಾತಂತ್ರ್ಯ, ಹಕ್ಕು ಹಾಗೂ ಧಾರ್ಮಿಕ ಆಚರಣೆಗಳನ್ನೂ ತಡೆಯಲಾಗುತ್ತಿದೆ ಎಂದರು.
ಭಾರತದ ಈ ನಡೆ ಅಂತರಾಷ್ಟ್ರೀಯ ಕಾನೂನು ಮತ್ತು ಅಬ್ರಹಾಮಿಕ್ ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ. ಮಾತ್ರವಲ್ಲ ಮಾನವೀಯತೆ ಮತ್ತು ನಾಗರಿಕರ ಸುರಕ್ಷತೆ, ಧರ್ಮ ಮತ್ತು ನಂಬಿಕೆಗಳನ್ನು ಲೆಕ್ಕಿಸದೆ ಸ್ವಾತಂತ್ರ್ಯವನ್ನು ಒದಗಿಸುವ ದೇಶದ ಜವಾಬ್ದಾರಿಗೆ ವಿರುದ್ಧವಾಗಿದೆ ಎಂದು ಬಹ್ರೇನ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಹ್ರೇನ್‌ನ ಭಾರತೀಯ ರಾಯಭಾರಿ ಮೂಲಕ ನಮ್ಮ ನಿಲುವನ್ನು ಭಾರತ ಸರ್ಕಾರಕ್ಕೆ ತಲುಪಿಸುವಂತೆ ಪದೇ ಪದೇ ಕೇಳಿಕೊಂಡಿದ್ದು, ನ್ಯಾಯಸಮ್ಮತವಲ್ಲದ ಕಾರಣಗಳಿಂದ ನುಣುಚಿಕೊಂಡಿದ್ದಾರೆ. ಭಾರತೀಯ ಮುಸ್ಲಿಮರ ಹಕ್ಕು, ಧಾರ್ಮಿಕ ಸ್ವಾತಂತ್ರ್ಯದ ಸಂರಕ್ಷಣೆಗಾಗಿ ಪ್ರಪಂಚಾದ್ಯಂತವಿರುವ ಮುಸ್ಲಿಮರು ಒಗ್ಗಟ್ಟಾಗಬೇಕೆಂದು ಅವರು ಕರೆ ನೀಡಿದರು.
ಬಹ್ರೇನ್ ಮತ್ತು ಭಾರತದ ನಡುವಿನ ಅಂತರಾಷ್ಟ್ರೀಯ ವ್ಯಾಪಾರ ವಹಿವಾಟು ವಾರ್ಷಿಕ 105 ಶತಕೋಟಿ ಡಾಲರ್ ಗಳನ್ನು ಮೀರಿದೆ. ಮುಸ್ಲಿಮರ ಮೇಲಿನ ಹಿಂಸಾಚಾರ, ನಿರ್ಬಂಧವನ್ನು ಮುಂದುವರಿಸಿದರೆ ಭಾರತವು ಆರ್ಥಿಕ ದಿಗ್ನಂಧನವನ್ನು ಎದುರಿಸಬೇಕಾಗುತ್ತದೆ ಎಂದು ಅಬ್ದುಲ್ ರಝಾಕ್ ಎಚ್ಚರಿಸಿದರು.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ