ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಿರತೆ ಕಾಟ ಶುರುವಾಗಿದೆ. ರಾತ್ರಿ ವೇಳೆ ರನ್ ವೇ ಬಳಿ 3-4 ಬಾರಿ ಚಿರತೆ ಓಡಾಟ ಕಂಡುಬರುತ್ತಿದೆ. ಇದು ವಿಮಾನನಿಲ್ದಾಣ ದ ಭದ್ರತಾ ವಿಭಾಗದ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಮಾತ್ರವಲ್ಲದೆ ನವಿಲು, ಕಾಡು ಹಂದಿ, ನರಿಗಳು ಸೇರಿದಂತೆ ಕಾಡು ಪ್ರಾಣಿ ಮತ್ತು ಪಕ್ಷಿಗಳು ರನ್ ವೇ ಬಳಿ ಕಂಡು ಬರುತ್ತಿವೆ.
ಚಿರತೆ ಪತ್ತೆಯಾಗಿರುವ ಕಾರಣ ಆತಂಕಗೊಂಡಿರುವ ವಿಮಾನ ನಿಲ್ದಾಣ ಅಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅರಣ್ಯ ಇಲಾಖೆಯ ಪ್ರಾಣಿ ಸರ್ವೇ ವರದಿ ಪ್ರಕಾರ ಕಳೆದ ಐದು ವರ್ಷಗಳ ಹಿಂದೆ ಮಂಗಳೂರು ರೇಂಜ್ ವ್ಯಾಪ್ತಿಯಲ್ಲಿ 2-3 ಚಿರತೆಗಳಿದ್ದವು ಆದರೆ ಪ್ರಸ್ತುತ ಇವುಗಳ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ ಎಂದು ಹೇಳಲಾಗಿದೆ.
ಬಜ್ಪೆಯ ಕೆಂಜಾರಿನಲ್ಲಿ ಗುಡ್ಡದ ಮೇಲಿರುವ ವಿಮಾನ ನಿಲ್ದಾಣದ ಸುತ್ತಮುತ್ತ ಕಾಡು ಇರುವ ಕಾರಣ ಚಿರತೆಗಳ ಓಡಾಟ ಸಾಮಾನ್ಯ ಎಂದು ಹೇಳಲಾಗಿದೆ. ಆದರೆ ಕಳೆದ ಕೆಲವು ದಿನಗಳಿಂದ ರಾತ್ರಿ ಹೊತ್ತು ಚಿರತೆಗಳು ವಿಮಾನ ನಿಲ್ದಾಣ ಪ್ರವೇಶಿಸುತ್ತಿವೆ. ಕಳೆದ ಕೆಲವು ದಿನಗಳಿಂದ ಚಿರತೆ ರನ್ ವೇ ಸುತ್ತ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸಿ ಆಕಸ್ಮಿಕವಾಗಿ ಬಂದಿರಬಹುದು ಅಂದುಕೊಂಡಿದ್ದ ಅಧಿಕಾರಿಗಳಿಗೆ ಇತ್ತೀಚೆಗೆ ಸರಾಗವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದು ಅಚ್ಚರಿ ತಂದಿದೆ. ವಿಮಾನ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಸಂದರ್ಭ ರನ್ ವೇ ಆಸುಪಾಸು ಪ್ರಾಣಿಗಳ ಓಡಾಟ ತೀರಾ ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ವಿಮಾನ ನಿಲ್ದಾಣದೊಳಗೆ ಚಿರತೆ ಹಿಡಿಯಲು ಬೋನು:
ಚಿರತೆಗಳಿಂದ ಭಯಗೊಂಡಿರುವ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಅಧಿಕಾರಿಗಳ ಮನವಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯೂ ಚುರುಕಾಗಿದ್ದು, ಚಿರತೆ ಪತ್ತೆ ಕಾರ್ಯಾಚರಣೆ ಆರಂಭಿಸಿದೆ. ಚಿರತೆ ಸೆರೆ ಹಿಡಿಯಲು ವಿಮಾನ ನಿಲ್ದಾಣದ ಒಳಗೆ 3 ಬೋನುಗಳನ್ನು ಇಡಲಾಗಿದೆ. ಸುತ್ತಲಿನ ಅರಣ್ಯ ಪ್ರದೇಶದಲ್ಲೂ 2 ಬೋನು ಇಡಲಾಗಿದೆ. ಒಟ್ಟು 5 ಬೋನುಗಳನ್ನು ಅಳವಡಿಸಲಾಗಿದೆ.
ಚಿರತೆಗಳ ಓಡಾಟದಿಂದ ವಿಮಾನನಿಲ್ದಾಣ ನಿಲ್ದಾಣದ ಅಧಿಕಾರಿಗಳು ಹಾಗು ಸಾರ್ವಜನಿಕರು ಭಯ ಪಡುವ ಅವಶ್ಯಕತೆಯಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ವಿಮಾನ ನಿಲ್ದಾಣ ಸುತ್ತಮುತ್ತಲಲ್ಲಿ ಚಿರತೆಯ ಚಲನವಲನ ಕಂಡುಬಂದರೆ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದ್ದು ಚಿರತೆ ಸೆರೆ ಹಿಡಿಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.
ಚಿರತೆಗಳು ರನ್ ವೇ ಪ್ರವೇಶಿಸದಂತೆ ಬಾರಿ ಕಟ್ಟೆಚ್ಚರ ವಹಿಸಲಾಗಿದೆ. ಒಂದು ವೇಳೆ ವಿಮಾನ ಲ್ಯಾಂಡಿಂಗ್ ಅಥವಾ ಟೇಕಾಫ್ ಆಗುವ ವೇಳೆ ಚಿರತೆ ಅಡ್ಡಬಂದರೆ ಅನಾಹುತವಾಗುವ ಆತಂಕ ವಿಮಾನ ನಿಲ್ದಾಣದ ಪ್ರಾಧಿಕಾರದ್ದು ಆಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ