janadhvani

Kannada Online News Paper

ರಾಜ್ಯ ವಕ್ಫ್ ಬೋರ್ಡ್‌ ಅಧ್ಯಕ್ಷರಾಗಿ ಎನ್ ಕೆ ಎಂ ಶಾಫಿ ಸಅದಿ ಆಯ್ಕೆ

ಬೆಂಗಳೂರು,ನ.17: ಕರ್ನಾಟಕ ರಾಜ್ಯ ವಖ್ಫ್ ಬೋರ್ಡ್‌ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎನ್ ಕೆ ಎಂ ಶಾಫಿ ಸಅದಿ ಗೆಲುವಿನ ನಗೆ ಬೀರಿದ್ದಾರೆ. ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಬಹುಮತದೊಂದಿಗೆ, ಶಾಫಿ ಸಅದಿಯವರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಎರಡು ಬಾರಿ ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಶಾಫಿ ಸಅದಿಯವರು ಕರ್ನಾಟಕ ರಾಜ್ಯ ಸರಕಾರದಿಂದ ಕಳೆದ ಎರಡು ಅವಧಿಗೆ ರಾಜ್ಯ ವಕ್ಫ್ ಬೋರ್ಡ್ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದರು.
ಸದ್ಯ ಕರ್ನಾಟಕ ಮುಸ್ಲಿಮ್ ಜಮಾಅತ್ ಇದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಉಲಮಾ(ಮೌಲಾನ) ಒಬ್ಬರು ಕರ್ನಾಟಕ ರಾಜ್ಯ ವಕ್ಫ್‌ ಬೋರ್ಡ್‌ ಅಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದು, ಕರಾವಳಿಗೂ ಇದು ಮೊದಲ ಆಯ್ಕೆಯಾಗಿದೆ.

ವಕ್ಫ್ ಮಂಡಳಿ ಅದ್ಯಕ್ಷರಾಗಿದ್ದ ಮುಹಮ್ಮದ್ ಯೂಸುಫ್ ಅವರ ನಿಧನದ ಬಳಿಕ ತೆರವಾಗಿದ್ದ ಅದ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿತ್ತು.

ಈ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ತನ್ವೀರ್ ಸೇಠ್, ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್, ಶಾಸಕಿ ಕನೀಝ್ ಫಾತಿಮಾ ಹಾಗೂ ಸದಸ್ಯರಾದ ಅಬ್ದುಲ್ ರಿಯಾಝ್ ಖಾನ್, ಯಾಕೂಬ್ ಇತರರಿದ್ದರು.

ಶಾಫಿ ಸಅದಿ ಆಯ್ಕೆಗೆ ಹರ್ಷ ವ್ಯಕ್ತಪಡಿಸಿದ ಇಂಡಿಯನ್ ಗ್ಯಾಂಡ್‌ ಮುಫ್ತಿ:

ಇಂಡಿಯನ್‌ ಗ್ರ್ಯಾಂಡ್‌ ಮುಫ್ತಿ ಖಮರುಲ್‌ ಉಲಮಾ ಕಾಂತಪುರಂ ಎ.ಪಿ.ಅಬೂಬಕ್ಕರ್‌ ಮುಸ್ಲಿಯಾರ್‌ ಅವರು ತಮ್ಮ ತುರ್ತು ಸಂದೇಶದಲ್ಲಿ ಶಾಫಿ ಸಅದಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ‌‌

ಝೈನುಲ್‌ ಉಲಮಾರಿಂದ ಅಭಿನಂದನೆ:

ಸುನ್ನೀ ಜಂಯ್ಯತುಲ್‌ ಉಲಮಾ ಕರ್ನಾಟಕ ರಾಜ್ಯ ಅಧ್ಯಕ್ಷ, ಉಡುಪಿ, ದ.ಕ.ಚಿಕ್ಕಮಗಳೂರು, ಹಾಸನ ಜಿಲ್ಲೆಯ ಸಂಯುಕ್ತ ಖಾಝಿ ಝೈನುಲ್‌ ಉಲಮಾ ಮಾಣಿ ಉಸ್ತಾದ್‌ ಶಾಫಿ ಸಅದಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಶಾಫಿ ಸಅದಿಯವರು ಉತ್ತಮ ಆಡಳಿತ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೆಸಿಎಫ್‌ ಅಂತಾರಾಷ್ಟ್ರೀಯ ಅಧ್ಯಕ್ಷರಾದ ಹಾಜಿ ಶೇಖ್‌ ಬಾವ ಅಭಿನಂದನೆ ಸಲ್ಲಿಸಿದ್ದಾರೆ.

ಇತಿಹಾಸ ಸೃಷ್ಟಿಸಿದರು ಶಾಫಿ ಸಅದಿ

error: Content is protected !! Not allowed copy content from janadhvani.com