ಮಂಗಳೂರು: ಹಂಚು ಮತ್ತು ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತಿದ್ದ ಜಾರ್ಖಂಡ್ ಮೂಲದ ದಂಪತಿಗಳ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಅಮಾನುಷ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಗುರುಪುರ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ.
ಪರಾರಿ ಎಂಬಲ್ಲಿ ರಾಜ್ ಟೈಲ್ಸ್ ಎಂಬ ಹೆಸರಿನ ಹೆಂಚಿನ ಕಾರ್ಖಾನೆ ಕಾರ್ಯಾಚರಿಸುತ್ತಿದ್ದು , ಇಲ್ಲಿ ರಾಜ್ಯ, ಹೊರರಾಜ್ಯದ ಪುರುಷ ಮತ್ತು ಮಹಿಳಾ ಕಾರ್ಮಿಕರೂ ದುಡಿಯುತ್ತಿದ್ದಾರೆ. ಈ ಪೈಕಿ ಜಾರ್ಖಂಡ್ ಮೂಲದ ಮಹಿಳೆಯೋರ್ವರ 8 ವರ್ಷದ ಹೆಣ್ಣು ಮಗು ರವಿವಾರ ಸಂಜೆಯಿಂದ ನಾಪತ್ತೆಯಾಗಿತ್ತು.
ಮಧ್ಯಾಹ್ನದ ವೇಳೆಗೆ ಮಗು ನಾಪತ್ತೆಯಾಗಿದ್ದು, ಕೆಲಸದಲ್ಲಿದ್ದ ತಂದೆ ತಾಯಿಗೆ ಸಂಜೆ ನಾಲ್ಕು ಗಂಟೆಯ ವೇಳೆ ಗಮನಕ್ಕೆ ಬಂದಿದೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೋಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೋಲೀಸರು, ಶೀಘ್ರದಲ್ಲೇ ಪೂರ್ಣ ಮಾಹಿತಿಯನ್ನು ನೀಡುವುದಾಗಿ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ