ರಿಯಾದ್: ಸೌದಿ ಅರೇಬಿಯಾದಲ್ಲಿ ಸಾಂಕ್ರಾಮಿಕ ರೋಗವು ಏಕಾಏಕಿ ಏರಿಕೆ ಸಂಭವಿಸುವ ಬಗ್ಗೆ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಸುರಕ್ಷತೆಯ ದೃಷ್ಟಿಯಿಂದ ಸ್ಥಳೀಯರು ಮತ್ತು ವಿದೇಶಿಗರು ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಸಚಿವಾಲಯ ಕರೆ ನೀಡಿದೆ. ಐದು ದಶಲಕ್ಷಕ್ಕೂ ಹೆಚ್ಚು ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ.
ಸಾಂಕ್ರಾಮಿಕ ರೋಗವು ವ್ಯತ್ಯಸ್ಥ ರೂಪದಲ್ಲಿ ಜನರಲ್ಲಿ ಕಾಣಿಸಿ ಕೊಳ್ಳಲಿದೆ. ಸೋಂಕು ತಗಲಿದ್ದಲ್ಲಿ ಆಸ್ಪತ್ರೆಗೆ ದಾಖಲಿಸಬೇಕು. ಪ್ರಸ್ತುತ ಇತರ ಆರೋಗ್ಯ ಸಮಸ್ಯೆಗಳಿರುವವರ ಜೀವಕ್ಕೂ ಅಪಾಯವಿದೆ. ಆರೋಗ್ಯವಂತರೂ ಜಾಗರೂಕರಾಗಿರಬೇಕು. ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಸಡಿಲಗೊಳಿಸಿದ್ದು, ಸಾಂಕ್ರಾಮಿಕ ರೋಗ ಏಕಾಏಕಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವಾಲಯದ ವಕ್ತಾರರಾದ ಮುಹಮ್ಮದ್ ಅಲ್-ಅಬ್ದುಲ್ ಅಲಿ ಹೇಳಿದರು.
ಹವಾಮಾನ ಬದಲಾವಣೆಯು ಸಾಂಕ್ರಾಮಿಕ ರೋಗಗಳ ಹೆಚ್ಚಳಕ್ಕೆ ಕಾರಣವಾಗಬಹುದು. ದೇಶದಲ್ಲಿ ಡಿಸೆಂಬರ್ ಏಳರಿಂದ ಮೂರು ತಿಂಗಳ ಕಾಲ ಚಳಿಗಾಲವಾಗಿರುತ್ತದೆ. ಆದ್ದರಿಂದ, ಆರೋಗ್ಯ ಸಚಿವಾಲಯವು ಎಲ್ಲಾ ನಾಗರಿಕರು ಮತ್ತು ನಿವಾಸಿಗಳಿಗೆ ಇನ್ಫ್ಲುಯೆನ್ಸ ವಿರುದ್ಧ ಲಸಿಕೆ ಹಾಕುವಂತೆ ಕೇಳಿದೆ. ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ.
ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಗಳನ್ನು ಉಚಿತವಾಗಿ ನೀಡಲಾಗುತ್ತದೆ. ಜನನಿಬಿಡ ಸ್ಥಳಗಳಿಂದ ದೂರವಿರಿ, ಶುಚಿತ್ವವನ್ನು ಖಾತ್ರಿಪಡಿಸಿಕೊಳ್ಳಿ, ತಮ್ಮ ಕೈಗಳನ್ನು ಚೆನ್ನಾಗಿ ತೊಳೆಯಬೇಕು ಮತ್ತು ತಮ್ಮ ಕೈಗಳಿಂದ ಅವರ ಕಣ್ಣು, ಬಾಯಿ ಮತ್ತು ಮೂಗನ್ನು ಮುಟ್ಟುವುದನ್ನು ತಪ್ಪಿಸಲು ಸಚಿವಾಲಯವು ಜನರನ್ನು ಕೇಳಿದೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ