ಬೆಂಗಳೂರು: ಕೊರೊನಾ 3ನೆಯ ಅಲೆ ಬೀಸುತ್ತಿದ್ದಂತೆ ಎಚ್ಚೆತ್ತಿರುವ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯಾದ್ಯಂತ ಶಾಲೆಗಳ ಆರಂಭಕ್ಕೆ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
- ಪ್ರತಿದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗೆ ಅವಕಾಶ ನೀಡಲಾಗಿದೆ.
- ಶಾಲೆಗೆ ಬರುವುದಕ್ಕೆ ಪೋಷಕರ ಅನುಮತಿ ಪತ್ರ ತರಬೇಕು.
- ಶಾಲೆಯಲ್ಲಿ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
- ವಿದ್ಯಾರ್ಥಿಗಳಿಗೆ ಭೌತಿಕ ಹಾಜರಾತಿ ಕಡ್ಡಾಯವಿರುವುದಿಲ್ಲ. .
- ಮಗುವಿಗೆ ಕೊರೊನಾ ಲಕ್ಷಣ ಇಲ್ಲದ ಕುರಿತು ಪೋಷಕರು ದೃಢಪಡಿಸಬೇಕು.
ಎಂಬ ಮಾರ್ಗಸೂಚಿಗಳು ಅನಾವರಣಗೊಂಡಿವೆ..
ಎಲ್ಲ ವಿದ್ಯಾರ್ಥಿಗಳು ತರಗತಿಗೆ ಬರುವುದು ಕಡ್ಡಾಯವಲ್ಲ. ಆನ್‌ಲೈನ್ / ಪರ್ಯಾಯ ವಿಧಾನದಲ್ಲಿ ಹಾಜರಿಗೂ ಅಸ್ತು ಎನ್ನಲಾಗಿದೆ. ಶಾಲೆಗೆ ಹಾಜರಾಗಲು ಬಯಸದಿರುವವರಿಗೆ ಒತ್ತಾಯವಿಲ್ಲ. ಆದರೆ ಆಯಾಯ ಕಾಲಕ್ಕೆ ಸರ್ಕಾರದ ಸೂಚನೆ ಪಾಲನೆ ಕಡ್ಡಾಯವಿರುತ್ತದೆ.
ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಚತೆ:
ಶಾಲೆಗಳ ಆರಂಭದಲ್ಲಿ ಪಾಲನೆಯಾಗುತ್ತಿದ್ದ ಗೈಡ್ ಲೈನ್ಸ್ ಟೈಟ್ ರೂಲ್ಸ್ ಪಾಲನೆಯೊಂದಿಗೆ ಮತ್ತೆ ಜಾರಿಗೆ. ಶೇ. 50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶವಿದೆ.ಅದೂ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ಒಪನ್ ಆಗಿರುತ್ತವೆ.
ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಚತಾ ಕಾರ್ಯ, ಸ್ಯಾನಿಟೈಸೇಶನ್ಗೆ ಅವಕಾಶ ನೀಡಲಾಗಿದೆ. ಮಕ್ಕಳಿಗೆ ಒಂದು ದಿನ ತರಗತಿ, ಒಂದು ದಿನ ರಜೆ ಇರಲಿದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. 15 ರಿಂದ 20 ಮಕ್ಕಳ ತಂಡ ರಚಿಸಿಕೊಂಡು, ಮಕ್ಕಳಿಗೆ ಪಾಠ ಮಾಡಬೇಕು. ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ ನೀಡಲಾಗಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರ ಇರಲೇಬೇಕು.
ಜನರ ದಿವ್ಯ ನಿರ್ಲಕ್ಷ್ಯ:
ಈ ಮಧ್ಯೆ, ರಾಜ್ಯದಲ್ಲಿ ರೂಪಾಂತರಿ ಒಮಿಕ್ರಾನ್ ಆತಂಕವಿದ್ದರೂ ಎಲ್ಲೆಡೆ ನಿರ್ಲಕ್ಷ್ಯ ಮೇರೆಮೀರಿದೆ. ಮಾರುಕಟ್ಟೆ, ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸರ್ಕಾರದಿಂದ ಆದೇಶ ಹೊರಬಿದ್ದಿದೆ. ಆದರೆ ರಾಜ್ಯ ಸರ್ಕಾರದ ಆದೇಶವನ್ನು ಜನ ಪಾಲಿಸುತ್ತಿಲ್ಲ.
ಮಂಗಳೂರು, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಗದಗ, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಜನರಿಂದ ಕೊವಿಡ್ ಗೈಡ್‌ಲೈನ್ಸ್ ಬ್ರೇಕ್ ಮಾಡಲಾಗುತ್ತಿದೆ
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ