ಉಳ್ಳಾಲ,ಡಿ.8: ಖುತುಬುಝ್ಜಮಾನ್ ಹಝ್ರತ್ ಅಸ್ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ) ತಂಙಳ್ ಅವರ 429ನೇ ವಾರ್ಷಿಕ ಮತ್ತು 21ನೇ ಪಂಚವಾರ್ಷಿಕ ಉರೂಸ್ ನೇರ್ಚೆ ಕಾರ್ಯಕ್ರಮವನ್ನು ಎರಡು ತಿಂಗಳ ಮಟ್ಟಿಗೆ ಮುಂದೂಡಲಾಗಿದೆ.
ಅಂತಾರಾಜ್ಯ ಪ್ರಯಾಣಿಕರು ಕರ್ನಾಟಕ ಪ್ರವೇಶಕ್ಕೆ RTPCR ವರದಿಯನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಈ ನಿಟ್ಟಿನಲ್ಲಿ ಉರೂಸ್ ಕಾರ್ಯಕ್ರಮಕ್ಕೆ ಆಗಮಿಸುವ ಅಂತಾರಾಜ್ಯ ಪ್ರಯಾಣಿಕರಿಗೆ ತೊಡಕಾಗಲಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಡಿ. 23ರಿಂದ ಜ. 16ರ ವರೆಗೆ ನಡೆಯಬೇಕಾಗಿದ್ದ ಉರೂಸ್ ಕಾರ್ಯಕ್ರಮವನ್ನು ಮುಂದೂಡುವಂತೆ ಸಲಹೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಉಳ್ಳಾಲ ದರ್ಗಾ ಮತ್ತು ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್, ಮುಂದಿನ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡು ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು ಎಂದಿದ್ದಾರೆ. ವೀಡಿಯೋ







