ದೆಹಲಿ: ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ಹರಡುವ ಭೀತಿಯಿಂದ ನಿಗದಿತ ಅಂತರರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲಿನ ನಿರ್ಬಂಧವನ್ನು ಕೇಂದ್ರ ಸರ್ಕಾರ ಜನವರಿ 31 ರವರೆಗೆ ವಿಸ್ತರಿಸಿದೆ.ಅಂತಾರಾಷ್ಟ್ರೀಯ ವಿಮಾನಯಾನ ಡಿಸೆಂಬರ್ 15 ರಿಂದ ಪುನಾರಂಭಗೊಳ್ಳಲಿದೆ ಎಂದು ಈ ಹಿಂದೆ ಹೇಳಲಾಗಿತ್ತು.
ಆದಾಗ್ಯೂ, ಹಲವಾರು ರಾಷ್ಟ್ರಗಳಲ್ಲಿ ಹೊಸ ‘ಒಮಿಕ್ರಾನ್’ ರೂಪಾಂತರಿ ಏಕಾಏಕಿ ಹೊರಹೊಮ್ಮಿದ್ದು ದೇಶವು ಈಗ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭದ ಯೋಜನೆಗಳಿಗೆ ಬ್ರೇಕ್ ಹಾಕಿದೆ. ಅಂತರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧ ವಿಸ್ತರಿಸಿರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಈ ಬಗ್ಗೆ ಹೊರಡಿಸಿದ ಸುತ್ತೋಲೆಯಲ್ಲಿ ಈ ನಿರ್ಬಂಧವು ಅಂತರರಾಷ್ಟ್ರೀಯ ಎಲ್ಲಾ ಸರಕು ಕಾರ್ಯಾಚರಣೆಗಳಿಗೆ ಮತ್ತು ನಿರ್ದಿಷ್ಟವಾಗಿ ಅನುಮೋದಿಸಲಾದ(ಏರ್ ಬಬಲ್) ಹಾರಾಟಕ್ಕೆ ಅನ್ವಯಿಸುವುದಿಲ್ಲ ಎಂದು ಹೇಳಿದೆ.
ಕೇಸ್-ಟು-ಕೇಸ್ ಆಧಾರದ ಮೇಲೆ ಆಯ್ದ ಮಾರ್ಗಗಳಲ್ಲಿ ಅಂತರರಾಷ್ಟ್ರೀಯ ವಿಮಾನಗಳನ್ನು ಅನುಮತಿಸಬಹುದು ಎಂದು ಅದು ಹೇಳಿದೆ. ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಅಂತರಾಷ್ಟ್ರೀಯ ಪ್ರಯಾಣದ ಬಗ್ಗೆ ಕಾಳಜಿಯ ಹೊಸ ಅಲೆಯನ್ನು ಹುಟ್ಟುಹಾಕಿದೆ. ಇದು ಹಲವಾರು ರಾಷ್ಟ್ರಗಳಿಂದ ಹೊಸ ಪ್ರಯಾಣ ಕ್ರಮಗಳನ್ನು ಹೇರಲು ಕಾರಣವಾಗಿದೆ.
ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು “ಅಪಾಯದಲ್ಲಿರುವ” ದೇಶಗಳಿಂದ ಆಗಮಿಸುವ ಮತ್ತು ಅವರ ಕಡ್ಡಾಯ ಕೊವಿಡ್ ಪರೀಕ್ಷೆಯನ್ನು ಮುಂಚಿತವಾಗಿ ಕಾಯ್ದಿರಿಸಿದ ಪ್ರಯಾಣಿಕರಿಗಾಗಿ 20 ಮೀಸಲಾದ ಕೌಂಟರ್‌ಗಳನ್ನು ಸ್ಥಾಪಿಸಿದ್ದಾರೆ. ಹೊಸ ಪ್ರಯಾಣ ಮಾರ್ಗಸೂಚಿಗಳ ಅನುಷ್ಠಾನದ ನಂತರ ಟರ್ಮಿನಲ್‌ನಲ್ಲಿ ಜನಸಂದಣಿ ಇದೆ ಎಂದು ಹಲವಾರು ಪ್ರಯಾಣಿಕರು ದೂರಿದ ನಂತರ ಇದು ಸಂಭವಿಸಿದೆ.
ಒಮಿಕ್ರಾನ್ ಎಚ್ಚರಿಕೆಯ ನಡುವೆ ಕಳೆದ ವಾರ ಹೊರಡಿಸಲಾದ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, “ಅಪಾಯದಲ್ಲಿರುವ” ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಇತರ ದೇಶಗಳಿಂದ ಬರುವ ಶೇಕಡಾ ಐದು ಪ್ರಯಾಣಿಕರು ಸಹ ಪರೀಕ್ಷೆಗೊಳಗಾಗಬೇಕಾಗುತ್ತದೆ.
ಕೊರೊನಾವೈರಸ್ ಕಾರಣದಿಂದ ಮಾರ್ಚ್ 2020 ರಲ್ಲಿ ವಾಣಿಜ್ಯ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ಸ್ಥಗಿತಗೊಳಿಸಲಾಯಿತು ಮತ್ತು 20 ತಿಂಗಳ ವಿರಾಮದ ನಂತರ ಡಿಸೆಂಬರ್ 15 ರಿಂದ ಪುನರಾರಂಭಿಸುವುದಾಗಿ ಸರ್ಕಾರ ನವೆಂಬರ್ 26 ರಂದು ಘೋಷಿಸಿತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ