ಬೆಂಗಳೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ದೇಶದ ಮೊದಲ ಸಿಡಿಎಸ್ ಬಿಪಿನ್ ರಾವತ್ ಅವ್ರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನ ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಟಿ.ಕೆ.ವಸಂತ್ ಕುಮಾರ್ (40) ನಗರದ ಖಾಸಗಿ ಲ್ಯಾಬ್ʼನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಕಾರ್ಯ ನಿರ್ವಹಿಸುತ್ತಿದ್ದಾನೆ.ಇನ್ನು ಈತನ ವಿರುದ್ಧ ಐಪಿಸಿ ಸೆಕ್ಷನ್ 505ರಡಿ ಎಫ್ ಐಆರ್ ದಾಖಲಿಸಲಾಗಿದೆ.
ಮೈಸೂರು ಮೂಲದ ಆರೋಪಿ, ಬಿಪಿನ್ ರಾವತ್ ಅವ್ರ ಸಾವನ್ನ ಸಂಭ್ರಮಿಸಿ ಫೇಸ್ ಬುಕ್ʼನಲ್ಲಿ ಪೋಸ್ಟ್ ಹಾಕಿದ್ದ. ಈತ ‘ಬಿಪಿನ್ ರಾವತ್, ಮೋದಿ ಗುಲಾಮತನದ ಒಂದು ತಲೆಮಾರು’, ‘ಚೀನಾ ಭಾರತ ಗಡಿಯಲ್ಲಿ ಬಂದು ಹಳ್ಳಿಗಳನ್ನ ನಿರ್ಮಿಸಿದಾಗ ಮೋದಿಯಂತೆ ಬುಡಬುಡಿಕೆ ಹೇಳಿಕೆ ಕೊಟ್ಟ ವ್ಯಕ್ತಿ, ರಾವತ್ ಸಾವಿನಿಂದ ದೇಶವಂತೂ ಪಾರಾಗಿದೆ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ. ಈ ಕುರಿತು ಒಂದು ಪ್ರಕರಣ ಮಂಗಳೂರಿನಲ್ಲಿ ದಾಖಲಾಗಿದ್ದು, ಸಧ್ಯ ಈ ಲ್ಯಾಬ್ ಟೆಕ್ನಿಷಿಯನ್ʼನನ್ನ ಪೊಲೀಸರು ಬಂಧಿಸಿದ್ದಾರೆ.
ರಾವತ್ ಅವರನ್ನು ಸಾವಿನ ಕುರಿತು ಆಕ್ಷೇಪಾರ್ಹ ಸ್ಟೇಟಸ್ ಪೋಸ್ಟ್ ಮಾಡಿದ್ದವರ ಪೈಕಿ ನಿನ್ನೆ ಮಧ್ಯಪ್ರದೇಶ ಮತ್ತು ಗುಜರಾತ್ನಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿತ್ತು. ಹಾಗೆಯೇ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕರ್ನಾಟಕದ ಟಿ.ಕೆ. ವಸಂತಕುಮಾರ್, ಸುಬ್ಬರಾವ್ ರವಿಕುಮಾರ್ ಅವರು ರಾವತ್ ವಿರುದ್ಧ ಹಾಗೂ ಶ್ರೀನಿವಾಸ ಕಾರ್ಕಳ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹಾಗಾರ ಅಜಿತ್ ದೋವಲ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದು, ಇವರೆಲ್ಲರ ವಿರುದ್ಧ ದೂರು ದಾಖಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ