ಹೊಸದಿಲ್ಲಿ: ಮಹಿಳೆಯರ ಕನಿಷ್ಠ ವಿವಾಹ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕಳೆದ ವರ್ಷ ಸ್ವಾತಂತ್ರೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದ್ದರು. ಅದಾಗಿ ಒಂದು ವರ್ಷದ ಬಳಿಕ ವಯೋಮಿತಿ ಹೆಚ್ಚಳದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅಸ್ತು ಎಂದಿದೆ. ಸದ್ಯ, ಪುರುಷರಿಗೆ ಕನಿಷ್ಠ ವಿವಾಹದ ವಯಸ್ಸು 21 ವರ್ಷ ಇದ್ದರೆ, ಮಹಿಳೆಯರಿಗೆ 18 ವರ್ಷ ಇದೆ.
ಜಯಾ ಜೇಟ್ಲಿ ನೇತೃತ್ವದ ನೀತಿ ಆಯೋಗದ ಕಾರ್ಯಪಡೆಯ ಶಿಫಾರಸಿನ ಆಧಾರದ ಮೇಲೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆರೋಗ್ಯ ಸಚಿವಾಲಯ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾನೂನು ಸಚಿವಾಲಯದ ಹಿರಿಯ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆಯನ್ನು ಕಳೆದ ವರ್ಷದ ಜೂನ್ನಲ್ಲಿ ರಚಿಸಲಾಗಿತ್ತು. ಈ ಕಾರ್ಯಪಡೆಯಲ್ಲಿ ಮಕ್ಕಳ ತಜ್ಞ ವಿಕೆ ಪಾಲ್ ಕೂಡ ಇದ್ದರು.
ಈಗ ಈ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಅಸ್ತು ಎಂದಿದ್ದು, ಸಂಸತ್ನಲ್ಲಿ ಹಲವು ಕಾಯ್ದೆಗಳ ತಿದ್ದುಪಡಿಗಾಗಿ ಮಸೂದೆ ಮಂಡಿಸಬೇಕಾಗಿದೆ. ಮಹಿಳೆಯರ ಕನಿಷ್ಠ ವಿವಾಹ ವಯೋಮಿತಿ ಹೆಚ್ಚಿಸಲು ಪ್ರಮುಖವಾಗಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ವಿಶೇಷ ವಿವಾಹ ಕಾಯ್ದೆ ಮತ್ತು ಹಿಂದೂ ವಿವಾಹ ಕಾಯ್ದೆಗೆ ತಿದ್ದುಪಡಿ ತರಬೇಕಾಗಿದೆ. ತಿದ್ದುಪಡಿ ತಂದ ಬಳಿಕ ಹೊಸ ನಿರ್ಧಾರಗಳು ಜಾರಿಯಾಗಲಿವೆ.
ಕಳೆದ ವರ್ಷ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ಈ ಸರಕಾರವು ಪುತ್ರಿಯರು ಹಾಗೂ ಸಹೋದರಿಯರ ಆರೋಗ್ಯದ ಬಗ್ಗೆ ನಿರಂತರವಾಗಿ ಕಾಳಜಿ ವಹಿಸುತ್ತದೆ. ಹೆಣ್ಣು ಮಕ್ಕಳನ್ನು ಅಪೌಷ್ಟಿಕತೆಯಿಂದ ರಕ್ಷಿಸಲು ಸರಿಯಾದ ವಯಸ್ಸಿನಲ್ಲಿ ವಿವಾಹವಾಗಬೇಕು ಎಂದು ಹೇಳಿದ್ದರು. ಅದಲ್ಲದೇ ಕಾರ್ಯಪಡೆ ಕೂಡ ಮಹಿಳೆ ಮೊದಲ ಮಗುವಿಗೆ ಜನ್ಮ ನೀಡುವ ವೇಳೆ ಆಕೆಯ ವಯಸ್ಸು 21 ಇರಬೇಕು ಎಂದು ಹೇಳಿದೆ ಎಂದು ಮೂಲಗಳು ತಿಳಿಸಿವೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ