ನವದೆಹಲಿ, ಡಿ.17: ಕೇಂದ್ರ ಸರ್ಕಾರವು ಕೆಲವು ತಪ್ಪುಗಳನ್ನು ಮಾಡಿರಬಹುದು. ಆದರೆ ಕೇಂದ್ರದ ಉದ್ದೇಶವೇ ತಪ್ಪು ಎಂದು ಹೇಳಲಾಗದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿಯಲ್ಲಿ ಜರುಗಿದ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ (ಎಫ್ಐಸಿಸಿಐ) 94ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು
ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ಬಹಳಷ್ಟು ಬದಲಾವಣೆಗಳಾಗಿರುವುದನ್ನು ವಿಮರ್ಶಕರು ಸಹ ಒಪ್ಪಿಕೊಳ್ಳುತ್ತಾರೆ. ನಮ್ಮ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪ ಬಂದಿಲ್ಲ. ಕೆಲವು ತಪ್ಪು ನಿರ್ಧಾರ ಕೈಗೊಂಡಿರಬಹು. ಆದರೆ ನಮ್ಮ ಉದ್ದೇಶವೇ ತಪ್ಪು ಎಂದು ಯಾರೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.
ಬಹುಪಕ್ಷೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಪುನಃ ಸ್ಥಾಪಿಸಿದ್ದಾರೆ ಎಂದು ಶಾ ಹೇಳಿದರು. ಮೋದಿ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಳ್ಳಲು ಪ್ರಾರಂಭಿಸಿದರು. ನಮ್ಮ ಬಹುಪಕ್ಷೀಯ ಪ್ರಜಾಪ್ರಭುತ್ವ ವ್ಯವಸ್ಥೆಯು ವಿಫಲವಾಗುತ್ತಿದೆಯೇ ಎಂದು ದೇಶವು ಆಶ್ಚರ್ಯ ಪಡುತ್ತಿತ್ತು. ನಮ್ಮ ಸರ್ಕಾರದ ದೊಡ್ಡ ಸಾಧನೆ ಎಂದರೆ ಪ್ರಧಾನಿ ಮೋದಿಯವರು ನಮ್ಮ ಬಹುಪಕ್ಷದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಬಲಪಡಿಸಿದ್ದಾರೆ ಎಂದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ