ಕೋಝಿಕ್ಕೋಡ್ | ಅಲಪ್ಪುಝದಲ್ಲಿ ಕೆಲವೇ ಗಂಟೆಗಳಲ್ಲಿ ನಡೆದ ಎರಡು ಕೊಲೆಗಳು ಅತ್ಯಂತ ಖಂಡನೀಯ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು. ಅಲ್ಲದೆ,ಈ ಅಪರಾಧ ಕೃತ್ಯಗಳನ್ನು ಎಸಗಿದ ದುಷ್ಕರ್ಮಿಗಳಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ಅವರು ಒತ್ತಾಯಿಸಿದರು.
ಕೋಮುವಾದಿ ನಡೆಗಳು ಯಾರ ಕಡೆಯಿಂದಲೂ ಸ್ವೀಕಾರಾರ್ಹವಲ್ಲ. ಅವರು ಕತ್ತಿ ಮಸೆಯುವುದನ್ನು ನಿಲ್ಲಿಸಬೇಕು.ಇವರಿಗೆ ಜನರನ್ನು ಅನ್ಯಾಯವಾಗಿ ಕೊಲ್ಲುವ ಅಧಿಕಾರ ಕೊಟ್ಟವರು ಯಾರು? ಆ ಎರಡು ಕುಟುಂಬದ ಮಕ್ಕಳನ್ನು ಮತ್ತು ಅವರ ಆತ್ಮೀಯರನ್ನು ಯಾವ ರೀತಿಯಲ್ಲಿ ಸಮಾಧಾನ ಪಡಿಸುವರು? ಕೆಲವು ನಾಯಕರ ಅಪಕ್ವ ಪ್ರತಿಕ್ರಿಯೆಗಳು ಕೂಡ ತುಂಬಾ ನೋವುಂಟು ಮಾಡುತ್ತಿದೆ.
ಕೇರಳದಲ್ಲಿ ಈ ಅಪಾಯಕಾರಿ ಚಳುವಳಿಯನ್ನು ತಡೆಯಲು ಸರ್ಕಾರ ಮತ್ತು ರಾಜಕೀಯ ಮತ್ತು ಸಾಮಾಜಿಕ ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕು. ದೇಶದ ಶಾಂತಿ ಕದಡುವವರ ವಿರುದ್ಧ ಯಾವುದೇ ರಾಜಕೀಯ ಪಕ್ಷ ಭೇದವಿಲ್ಲದೆ, ಕ್ರಮ ಕೈಗೊಳ್ಳಬೇಕು. ಇಂತಹ ಅಪರಾಧಗಳ ವಿರುದ್ಧ ಕಾನೂನು ಪರಿಪಾಲಕರು ಸಂಪೂರ್ಣ ಜಾಗರೂಕರಾಗಿರಬೇಕು ಎಂದು ಕಾಂತಪುರಂ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ