✒️ ರಿಯಾಝ್ ಟಿಪ್ಪುನಗರ ಶಾರ್ಜಾ
ವಿಟ್ಲ : ಇಲ್ಲಿಗೆ ಸಮೀಪದ ಟಿಪ್ಪು ನಗರದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ಮಿಂಚಿನ ಜನಸೇವೆಯ ಮೂಲಕ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸಿ ಊರಪರವೂರ ಪ್ರಶಂಸೆಗೆ ಪಾತ್ರವಾಗಿರುವ ಹೆಮ್ಮೆಯ ಸಂಘಟನೆಯಾಗಿದೆ,
ಹಝ್ರತ್ ಟಿಪ್ಪು ಸುಲ್ತಾನ್ ಪ್ರೆಂಡ್ಸ್ ಕಮಿಟಿ (ರಿ)
HTFC – ಟಿಪ್ಪು ನಗರ – ವಿಟ್ಲ.
ಊರಿನ ಬಡ ಹೆಣ್ಣು ಮಕ್ಕಳ ವಿವಾಹಕ್ಕೆ ಧನ ಸಹಾಯದಲ್ಲಿ ನೆರವಾಗುವುದು ಮತ್ತು ರೋಗಿಗಳ ಚಿಕಿತ್ಸೆಯ ವೆಚ್ಚ ಭರಿಸಲು ನೆರವಾಗುವುದು ಈ ಸಮಿತಿಯ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.
ಒಟ್ಟಿನಲ್ಲಿ ಈ ಸಂಘಟನೆಯು ಸಹೋದರತೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದೆ.
ಇತ್ತೀಚಿಗೆ ಸಮಿತಿಯ ವಾರ್ಷಿಕ ಮಹಾಸಭೆಯು ನಡೆಯಿತು.ಸಭೆಯ ಗೌರವಾಧ್ಯಕ್ಷರಾಗಿ ಉಮ್ಮರ್ ಮುಸ್ಲಿಯಾರ್ ,ಅಧ್ಯಕ್ಷರಾಗಿ ಸಮೀರ್ ಕೆ.ಎಸ್,ಪ್ರಧಾನ ಕಾರ್ಯದರ್ಶಿಯಾಗಿ ಶಮೀರ್ ಎಮ್ ಜಿ , ಕೋಶಾಧಿಕಾರಿಯಾಗಿ ಅಬೂಬಕ್ಕರ್ ಕೆ ಎನ್,ಸಂಚಾಲಕರಾಗಿ ಸಲೀಮ್ ಕೆ ಎಸ್ ಎ ಮತ್ತು ಉಪಾಧ್ಯಕ್ಷರುಗಳಾಗಿ ಮುನೀರ್ ದಮ್ಮಾಮ್ ರಹೀಮ್ ಟಿಪ್ಪು ನಗರ,ಜೊತೆ ಕಾರ್ಯದರ್ಶಿಗಳಾಗಿ ಆಶಿಕ್ ಕೊಡಂಗಾಯಿ ಮತ್ತು ತಾಜು ಟಿಪ್ಪು ನಗರ ಇವರನ್ನು ನೇಮಕ ಮಾಡಲಾಯಿತು. ಮತ್ತು ಜ್ಯೂನಿಯರ್ ತಂಡದ ನಾಯಕರಾಗಿ ಹಾರೀಸ್ ಪಿ, ಖಲಂದರ್ ಶಾಫಿ ಇವರನ್ನು ನೇಮಿಸಲಾಯಿತು, ನಂತರ ಸಮಿತಿಗೆ ಹೊಸ ಸದಸ್ಯರನ್ನು ಸೇರ್ಪಡೆ ಪಡಿಸಲಾಯಿತು.ಸಭೆಯ ಚುನಾವಣೆ ಅಧಿಕಾರಿಗಳಾಗಿ ಹಮೀದ್ ಎಮ್ ಎಸ್,ರಝಾಕ್ ಎಮ್ ಕೆ,ರಿಯಾಝ್ ಟಿಪ್ಪು ನಗರ ಭಾಗವಹಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್